Breaking News

Spread the love

ಮೂಡಲಗಿ: ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಕೇಂದ್ರ ಪ್ರಾಯೋಜಿತ ಪ್ರಧಾನ ಮಂತ್ರಿ ಔಪಚಾರಿಕ ಮೈಕ್ರೋ ಫುಡ್ ಪೆÇ್ರಸೆಸಿಂಗ್ ಎಂಟರ್‍ಪ್ರೈಸಸ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 11,910 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಯೋಜನೆಗೆ ಒಟ್ಟು 51.43 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಆಹಾರ ಸಂಸ್ಕರಣೆ ಘಟಕಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2020-21 ರಿಂದ 2024-25 ರವರೆಗಿನ ಐದು ವರ್ಷಗಳ ಅವಧಿಯಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ವಿಧಾನವನ್ನು ಆಧರಿಸಿ ಎರಡು ಲಕ್ಷ ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣ, ಸ್ಥಾಪನೆಗೆ ಹಣಕಾಸು, ತಾಂತ್ರಿಕ ಮತ್ತು ವ್ಯಾಪಾರ ಬೆಂಬಲವನ್ನು ಒದಗಿಸಲು ಅಂದಾಜು 10,000 ಕೋಟಿ ರೂ. ನೀಡಲಾಗಿದೆ.
ಕರ್ನಾಟಕ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ನಿರ್ದಿಷ್ಟ ಕೃಷಿ ಉತ್ಪನ್ನಗಳು/ಆಹಾರ ಉತ್ಪನ್ನಗಳನ್ನು ಒಂದು ಜಿಲ್ಲೆ ಒಂದು ಉತ್ಪನ್ನ ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಒಟ್ಟು 52 ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ 2 ಮೆಗಾ ಫುಡ್ ಪಾರ್ಕ್‍ಗಳು, 16 ಕೋಲ್ಡ್ ಚೈನ್ ಯೋಜನೆಗಳು, 4 ಆಗ್ರೋ ಪೆÇ್ರಸೆಸಿಂಗ್ ಕ್ಲಸ್ಟರ್‍ಗಳು, 18 ಆಹಾರ ಸಂಸ್ಕರಣಾ ಘಟಕಗಳು, 3 ಬ್ಯಾಕ್‍ವರ್ಡ್ ಮತ್ತು ಫಾರ್ವರ್ಡ್ ಲಿಂಕ್ ಯೋಜನೆಗಳು ಮತ್ತು 9 ಆಹಾರ ಪರೀಕ್ಷಾ ಪ್ರಯೋಗಾಲಯಗಳನ್ನು ಒಳಗೊಂಡಿದೆ ಎಂದು ಮಾನ್ಯ ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ