*ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತರಿಂದ ಸೇವೆ ಸ್ಥಗಿತ !* ಮೂಡಲಗಿ ಜುಲೈ 13 : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬೇಡಿಕೆಗಳು …
Read More »Daily Archives: ಜುಲೈ 13, 2020
ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ
ಕೋವಿಡ್-೧೯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಬ್ಬರು ಮರಣ ಹೊಂದಿದ್ದಾರೆ. 1. ಅಥಣಿ – ಪುರುಷ 2. ಗೋಕಾಕ- ಪುರುಷ ಜಿಲ್ಲೆಯಲ್ಲಿ ಇಂದು ಮತ್ತೆ 27 ಹೊಸ ಕೊರೋನಾ ಸೋಂಕಿತರು ಪತ್ತೆ ಆಗಿದ್ದಾರೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 497 ಕ್ಕೆ ಏರಿಕೆ ಆಗಿದೆ. ಬೆಳಗಾವಿ ತಾಲೂಕಿನಲ್ಲಿ 13, ಅಥಣಿ ತಾಲೂಕಿನಲ್ಲಿ 11, ಗೋಕಾಕ್, ಬೈಲಹೊಂಗಲ, ರಾಮದುರ್ಗ ತಾಲೂಕುಗಳಲ್ಲಿ ತಲಾ ಒಂದು ಪ್ರಕರಣಗಳು ಇಂದು ಪತ್ತೆ ಆಗಿವೆ.
Read More »ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿ ಮುಂದಿನ 10 ದಿನಗಳ ಸಂಪೂರ್ಣ ಲಾಕ್ ಡೌನ್
ಮೂಡಲಗಿ: ಮಂಗಳವಾರ ಜುಲೈ 14 ರಿಂದ 24 ರವರೆಗೆ ಸ್ವಯಂ ಪ್ರೇರಿತವಾಗಿ ಮೂಡಲಗಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ ಡಿ.ಜೆ ಮಹಾತ್ ತಿಳಿಸಿದ್ದಾರೆ. ಸೋಮವಾರ ಸಾಂಯಕಾಲ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವರಾದ ರಮೇಶ ಜಾರಕಿಹೊಳಿ ರವಿವಾರ ಜರುಗಿದ ಸಭೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಸಂಪೂರ್ಣ ಲಾಕ್ ಡೌಕ್ ಮಾಡಲು ತಾಲೂಕಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದರಿಂದ ಸಾರ್ವಜನಿಕರು ಕೊರೋನಾ ಸೋಂಕು ನಿಯಂತ್ರಿಸಲು …
Read More »ಕೌಜಲಗಿಯಲ್ಲಿ 49 ವರ್ಷದ ವ್ಯಕ್ತಿ ಕರೋನಾಗೆ ಬಲಿ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿ 49 ವರ್ಷದ ವ್ಯಕ್ತಿ ಕರೋನಾಗೆ ಬಲಿಯಾಗಿದ್ದಾರೆ. ಕೊರೋನಾ ದೃಢವಾದ ಒಂದೇ ದಿನದಲ್ಲಿ ಬಲಿಯಾದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಒಟ್ಟು ಹದಿಮೂರು ಬಲಿಯಾದಂತಾಗಿದೆ. ಇಂದು ಬೆಳಗ್ಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವ್ಯಕ್ತಿ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
Read More »