ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ ಹಾಗೂ …
Read More »Daily Archives: ಏಪ್ರಿಲ್ 26, 2021
ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
ನಾಳೆಯಿಂದ ನಡೆಯಬೇಕಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಾಳೆಯಿಂದ ನಡೆಯಬೇಕಿದ್ದ ಎಲ್ಲಾ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಿದೆ. ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಕೊರೊನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
Read More »ಮೊದಲ ಹಂತದಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು.
Read More »