ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ ಮೂಡಲಗಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧುಕಾರಿ ಅಜೀತ ಮನ್ನಿಕೇರಿ ಹೇಳಿದರು. ಜು.19 ಹಾಗೂ 22ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಇದ್ದರೂ ಕೋವಿಡ್ ಶಿಷ್ಟಾಚಾರದ ಸಲುವಾಗಿ 8.30ಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಬರುವಂತೆ ಸೂಚನೆ ನೀಡಲಾಗಿದೆ.ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವಂತೆ ಆಯಾ …
Read More »Monthly Archives: ಜುಲೈ 2021
ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಅರಭಾವಿ ಮತಕ್ಷೇತ್ರಕ್ಕೆ ಜೆಜೆಎಂ ಯೋಜನೆಯಡಿ 36.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ 1.60 …
Read More »ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಿಸುವ ನಿಟ್ಟಿನಲ್ಲಿ ಕೆಲವು ವಿನೂತನ ವಿಶೇಷ ಕಾರ್ಯಕ್ರಮಗಳು
ಬೆಟಗೇರಿ:ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಿಂದ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಿಸುವ ನಿಟ್ಟಿನಲ್ಲಿ ಕೆಲವು ವಿನೂತನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರೇರಣಾ ಕಾರ್ಯ ಮಾಡಲಾಗುತ್ತಿದೆ ಎಂದು ಇಲ್ಲಿಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಮಂಗಳವಾರ ಜು.13ರಂದು ಅವರು, ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯದ ಬಿಇಒ …
Read More »ಮೀಸಲಾತಿ ಅವಧಿ ವಿಸ್ತರಣೆ
ಮೀಸಲಾತಿ ಅವಧಿ ವಿಸ್ತರಣೆ ಮೂಡಲಗಿ : ಆಲಮಟ್ಟಿ ಮುಳುಗಡೆ ಸಂತ್ರಸ್ತರ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗ ಹಾಗೂ ಶಿಕ್ಷಣಕ್ಕೆ ನಿಗದಿ ಪಡಿಸಿದ ಮೀಸಲಾತಿ ಸೌಲಭ್ಯ ಅವಧಿಯನು ಮತ್ತೆ 25 ವರ್ಷ ಮುಂದುವರಿಸಲು ಒಪ್ಪಿ ಸರಕಾರ ಪ್ರಕಟಣೆ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ತಿಳಿಸಿದ್ದಾರೆ. ಸರಕಾರವು ಇದೇ 7 ರಂದು ಪ್ರಕಟಣೆ ನೀಡಿ ದಿನಾಂಕ 23/11/2020 ರಿಂದ ಪೂರ್ವಾನ್ವಯವಾಗುವಂತೆ ಅವಧಿ ವಿಸ್ತರಿಸಿ ಪ್ರಕಟಣೆ ನೀಡಿದೆ …
Read More »ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ. ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ
ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ. ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ …
Read More »ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಆಯೋಜಿಸಿರುವ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮ
ಮೂಡಲಗಿ: ಕೋವಿಡ್-19 ಸಂದರ್ಭದಲ್ಲಿ ಭೌತಿಕವಾಗಿ ತರಗತಿಗಳನ್ನು ನಡೆಸಲು ಸಾಧ್ಯವಾಗಿರುವದಿಲ್ಲ. ಅಗತ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಜ್ಞಾನಾರ್ಜನೆ ಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಿದೆ. ಪರೀಕ್ಷಾ ತಯಾರಿಗಾಗಿ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೇರಣಾ ಕಾರ್ಯ ಮಾಡಲಾಗುತ್ತಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಆಯೋಜಿಸಿರುವ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಸ್.ಎಸ್.ಎಲ್.ಸಿ ಮಕ್ಕಳ ಮನೆ …
Read More »ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ
ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳೆಸಲು ಮುಂದಾಗಬೇಕು. ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ ಎಂದು ಮೂಡಲಗಿ ಕೇಂದ್ರದ ಶ್ರೀಕ್ಷೇಧಗ್ರಾಯೋ ಬಿಸಿ ಟ್ರಸ್ಟ್ ಯೋಜನಾಧಿಕಾರಿ ದೇವರಾಜ್.ಎಂ ಹೇಳಿದರು. ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ಜು.12ರಂದು ನಡೆದ ಪರಿಸರ …
Read More »ಪ್ರೆಸ್‍ಕ್ಲಬ್ ಸದಸ್ಯರಿಗೆ ಮಾಸ್ಕ್,ಸ್ಯಾನಿಟೈಜರ ವಿತರಣೆ
ಪ್ರೆಸ್‍ಕ್ಲಬ್ ಸದಸ್ಯರಿಗೆ ಮಾಸ್ಕ್,ಸ್ಯಾನಿಟೈಜರ ವಿತರಣೆ ಮೂಡಲಗಿ: ಅನ್‍ಲಾಕ್ ಸಮಯದಲ್ಲಿ ಪತ್ರಕರ್ತರು ಸುದ್ದಿ ಸಂಗ್ರಹಣೆಗಾಗಿ ಅಲೆದಾಡುವ ಸಂದರ್ಭದಲ್ಲಿ ಸುರಕ್ಷಿತವಾಗಿರಲೆಂದು ಗ್ರಾಮೀಣ ಕೂಟದ ಮಾಸ್ಕ್, ಸ್ಯಾನಿಟೈಜರ ವಿತರಣೆ ಕಾರ್ಯವು ಶ್ಲಾಘನೀಯವಾಗಿದೆ ಎಂದು ಪ್ರಸ್‍ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಹೇಳಿದರು. ಗ್ರಾಮೀಣ ಕೂಟ ಕಿರು ಹಣಕಾಸು ಸಂಸ್ಥೆ ವತಿಂದ ಪ್ರೆಸ್‍ಕ್ಲಬ್ ಸದಸ್ಯರಿಗೆ ಮಾಸ್ಕ್, ಸ್ಯಾನಿಟೈಜರ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಎರಡನೆ ಅಲೆಯ ಅಂದರ್ಭದಲ್ಲಿ ಸಾಕಷ್ಟು ಪತ್ರಕರ್ತರು ಕೊರೋನಾಗೆ ಬಲಿಯಾಗಿದ್ದಾರೆ.ಸರ್ಕಾರ ಅವರ …
Read More »ಕೊರೋನ ರೋಗದ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ- ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ; ಕೊರೋನ ಸಾಂಕ್ರಾಮಿಕ ರೋಗದ ಅಲೆಯ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ. ಯಾವುದೇ ಕಾರಣಕ್ಕೂ ಭಯ ಪಡದೆ ವಿದ್ಯಾರ್ಥಿಗಳು ಮತ್ತು ಪಾಲಕರು ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಮೂಡಲಗಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ‘ಕ್ಲಸ್ಟರ ಮಟ್ಟದ’ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊವೀಡ್-19 ಸಂದರ್ಭದಲ್ಲಿ ಶೈಕ್ಷಣಿಕವಾಗಿ ಭೌತಿಕವಾಗಿ ತರಗತಿಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಸಮೂಹ ಮಾದ್ಯಮ ಹಾಗೂ ಸಾಮಾಜಿಕ …
Read More »ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ- ಅರವಿಂದ್ರ ದಳವಾಯಿ
ಮೂಡಲಗಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿಯವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಾಗೂ ತಳ್ಳು ಗಾಡಿಗಳ ಮೂಲಕ ಕಲ್ಮೇಶ್ವರ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜ ರೋಡ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. …
Read More »