Breaking News

Daily Archives: ಆಗಷ್ಟ್ 23, 2021

9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಭವ್ಯ ಸ್ವಾಗತ

ಬೆಟಗೇರಿ:ಕರೊನಾ ಸೋಂಕಿನ ಭೀತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸರ್ಕಾರದ ನಿರ್ದೇಶನದಂತೆ ಆರಂಭವಾದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಭವ್ಯ ಸ್ವಾಗತ ಕೋರುವ ಕಾರ್ಯಕ್ರಮ ಸೋಮವಾರ ಆ.23 ರಂದು ನಡೆಯಿತು. ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಮಾತನಾಡಿ, ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ನಿಯಮಗಳನ್ನು ಶಾಲಾ ಮಕ್ಕಳಿಗೆ …

Read More »

ತರಗತಿ ಪ್ರಾರಂಭವಾಗಿರುವದರಿಂದ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಖುಷಿ ನೀಡಿದೆ – ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಕೊರೋನಾ ಮಹಾಮಾರಿಯ ದುಷ್ಪರಿಣಾಮದಿಂದಾಗಿ ಕೇಲವು ತಿಂಗಳುಗಳಿಂದ ಶೈಕ್ಷಣಿಕ ಚಟುವಟಿಕೆಗಳು ಭೌತಿಕವಾಗಿ ನಡೆಯದೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿವೆ. ಸದ್ಯ ಸರಕಾರ, ಇಲಾಖೆಯು ಕೋವಿಡ್-19 ನಿಯಮಾವಳಿಗಳ ಪ್ರಕಾರ ತರಗತಿ ಪ್ರಾರಂಭವಾಗಿರುವದರಿಂದ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಖುಷಿ ನೀಡಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸೋಮವಾರ ಪಟ್ಟಣದ 9 ನೇ ಮತ್ತು 10 ನೇ ತರಗತಿಗಳ ಪ್ರಾರಂಭೋತ್ಸವದಲ್ಲಿ ಸ್ಥಳೀಯ ಕೆ.ಎಚ್.ಎಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಭಾಗವಹಿಸಿ, …

Read More »

ಹಬ್ಬ-ಹರಿ ದಿನಗಳು, ಜಾತ್ರಾ ಮಹೋತ್ಸವ, ನಮ್ಮ ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ – ಮುರುಘ ರಾಜೇಂದ್ರ ಸ್ವಾಮೀಜಿ

ಬೆಟಗೇರಿ:ಪ್ರತಿಯೊಬ್ಬ ಮನುಷ್ಯನು ಪರೋಪಕಾರ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಹಬ್ಬ-ಹರಿ ದಿನಗಳು, ಜಾತ್ರಾ ಮಹೋತ್ಸವ, ನಮ್ಮ ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ ಎಂದು ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆ.23ರಂದು ನಡೆದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ, ಸತ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಧಾರ್ಮಿಕ ಕಾರ್ಯಗಳಿಗೆ ಸ್ಥಳೀಯರು ನೀಡುತ್ತಿರುವ ಸಹಾಯ, …

Read More »