ಬೆಟಗೇರಿ: ಅರಭಾಂವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ವೇಳೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೈನುಗಾಗಾರಿಕೆ ಸಮಸ್ಯೆಗಳ ಕುರಿತು ಸ್ಥಳೀಯ ರೈತರ ಜೋತೆಗೆ ಚರ್ಚಿಸಿ, ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಸಿಬ್ಬಂದಿ, ರೈತರು, ಗ್ರಾಹಕರು ಇದ್ದರು.
Read More »Daily Archives: ಅಕ್ಟೋಬರ್ 31, 2021
ಶಾಲೆಯ ಮಕ್ಕಳಿಂದ ಜಾಗೃತಿ ಜಾಥಾ ಕಾರ್ಯಾಕ್ರಮ
ಬೆಟಗೇರಿ:ಯಾರೂ ದೌರ್ಜನ್ಯ, ಶೋಷನೆಗೆ ಒಳಗಾಗಬಾರದು ಎಂಬ ಉದ್ಧೇಶದಿಂದ ಸರ್ಕಾರ ಹಲವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿಯಲ್ಲಿ ದೌರ್ಜನ್ಯ ಮುಕ್ತಿ ಅಭಿಯಾನದ ಪ್ರಯುಕ್ತ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು …
Read More »ಆನಂದ ಕಂದರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪಣೆ
ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಹೇಳಿದರು. ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶನಿವಾರ ಅ.30 ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ …
Read More »ಚಲನ ಚಿತ್ರ ನಟ ಪುನೀತ್ ಅವರಿಗೆ ಶ್ರದ್ಧಾಂಜಲಿ
ಬೆಟಗೇರಿ:ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ ಅ.29 ರಂದು ತೀವ್ರ ಹೃದಯಾಘಾತದಿಂದ ನಿಧನರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಖ್ಯಾತ ಚಲನ ಚಿತ್ರ ನಟ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಮಾಡಿ, ಮೇಣದ ಬತ್ತಿ ಹಚ್ಚಿ ಗುರುವಾರದಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಳೀಯ ಪುನೀತ ರಾಜಕುಮಾರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಯುವಕರು, ಗ್ರಾಮಸ್ಥರು, ಇದ್ದರು.
Read More »