Breaking News

Daily Archives: ಜನವರಿ 11, 2022

ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ

ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಮುತ್ತೆಪ್ಪ ನೀಲಣ್ಣವರ ಅವರನ್ನು ಜ.11ರಂದು ಸತ್ಕರಿಸುವ ಕಾರ್ಯಕ್ರಮ ಜರುಗಿತು. ಮುಖ್ಯಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿ, ಆರ್.ಬಿ.ಬೆಟಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಭಾರತೀಯ …

Read More »

  ‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’

  ‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’ ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ ಮಾಡುವ ಇಚ್ಛಾಶಕ್ತಿ ಇರುವುದು …

Read More »

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

 ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರ ಸಂಜೆ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ …

Read More »

ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ- ಸಿದ್ದಣ್ಣ ದುರದುಂಡಿ

ಬೆಳಗಾವಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮುನವಳ್ಳಿ ಜಿ ವಿ ನಾಯಕ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ …

Read More »