Breaking News

Daily Archives: ಜನವರಿ 14, 2022

ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ

ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮಕರ ಸಂಕ್ರಾತಿಯ ಪ್ರಯುಕ್ತ ಪುರ ಜನರಿಂದ ಸಂಜೆ ಹೊತ್ತು 7 ಗಂಟೆಯಿಂದ 10:30 ಗಂಟೆ ತನಕ ಒಬ್ಬರಿಗೊಬ್ಬರೂ ಎಳ್ಳು ಬೆಲ್ಲ ವಿನಿಮಯ, ಸವಿರುಚಿ ಸವಿಯುವ ಕಾರ್ಯಕ್ರಮ ಜ.14 ರಂದು ನಡೆಯಿತು. ಬೆಟಗೇರಿ ಗ್ರಾಮದ ಮಕ್ಕಳು, ಮಹಿಳೆಯರು, ಪುರುಷರು ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಗಳಿಗೆ ಭೇಟಿ ನೀಡಿ ನಾವು… ನೀವು… ಎಳ್ಳು ಬೆಲ್ಲದಂಗ ಇರೋಣ… ಅಂತಾ …

Read More »

ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರು- ರಮೇಶ ಅಳಗುಂಡಿ

ಬೆಟಗೇರಿ:ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರಾಗಿದ್ದರು. ವಿವೇಕಾನಂದರು ಯುವಕರಿಗೆ ಆದರ್ಶಪ್ರಯರಾಗಿ ಉಳಿದಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ಯುವ ಬ್ರಿಗೇಡ್ ವತಿಯಿಂದ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜ.12 ರಂದು ಆಯೋಜಿಸಿದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಇಂದಿನ ಯುಗದಲ್ಲಿ …

Read More »

ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ

ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್‍ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Read More »

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ …

Read More »

ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು

ಮೂಡಲಗಿ: ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುಷ್ಠಾನ ಅಧಿಕಾರಿ ಎಮ್.ಪಿ. ಮರನೂರ ಹೇಳಿದರು. ಮೂಡಲಗಿ ಕರುನಾಡು ಸೈನೀಕ ತರಬೇತಿ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಕರ್ನಾಟಕ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಕರುನಾಡು ಸೈನೀಕ ತರಬೇತಿ ಕೇಂದ್ರ, ಜನನಿ ಸಮಗ್ರ ಅಭಿವೃದ್ಧಿ ಸಂಸ್ಥೆ …

Read More »