ಫೆ. 9ರಂದು ರಾಜಾಪುರದಲ್ಲಿ ರೈತ ದಿನಾಚರಣೆ ಆಚರಣೆ, ಮಣ್ಣು ಆರೋಗ್ಯ ಚಿಂತನ ಕಾರ್ಯಕ್ರಮ ಮೂಡಲಗಿ: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಗೋಕಾಕ ತಾಲ್ಲೂಕು ಘಟಕದಿಂದ ತಾಲ್ಲೂಕಿನ ರಾಜಾಪುರ ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಫೆ. 9ರಂದು ಬೆಳಿಗ್ಗೆ 10ಕ್ಕೆ ರೈತ ದಿನಾಚರಣೆ ಮತ್ತು ಮಣ್ಣು ಆರೋಗ್ಯ ಕುರಿತು ಚಿಂತನ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜಾಪುರ ಗ್ರಾಮ ಪಂಚಾಯ್ತಿ …
Read More »Daily Archives: ಫೆಬ್ರವರಿ 6, 2022
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ರವಿವಾರ ಫೆ-06 ರಂದು ಪತ್ರಿಕಾ ಹೇಳಿಕೆ …
Read More »ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ : ಪಿಎಸ್ಐ ಹಾಲಪ್ಪ ಬಾಲದಂಡಿ
ಮೂಡಲಗಿ: ಯುವಕರು ಸುಂದರ ಜೀವನ ಪ್ರತಿನಿತ್ಯ ಕಳೆಯಬೇಕಾದರೆ ದಿನನಿತ್ಯ ಜೀವನದಲ್ಲಿ ಧ್ಯಾನ ಯೋಗ ಪ್ರಾಣಾಯಾಮ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಮೂಡಲಗಿ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಹಾಗೂ ಪೂರ್ವಿ ಕ್ರೀಡಾ …
Read More »ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.
ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ. ಗೋಕಾಕ: ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ …
Read More »ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ
ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಮುಡಲಗಿ: ತಾಲೂಕಿನ ವಡೇರಹಟ್ಟಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಸುಣಧೋಳಿಯಲ್ಲಿ ಹಮ್ಮಿಕೊಂಡಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎಸ್.ಐ.ಭಾಗೋಜಿ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಿಂದ ಕಲಿತ ಪಾಠವನ್ನು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಲು ಪ್ರೇರೆಪಿಸಿದ ಅವರು ಶಿಬಿರಕ್ಕೆ ಸಹಾಯ ಸಹಕಾರ ನೀಡಿದ ಶ್ರೀ ಶಿವಾನಂದ …
Read More »ಕಲಾವಿದರು ಜಾಗತೀಕರಣಕ್ಕೆ ಹೊಂದಿಕೊಳ್ಳಬೇಕಿದೆ- ಜಯಾನಂದ ಮಾದರ
ಕಲಾವಿದರು ಜಾಗತೀಕರಣಕ್ಕೆ ಹೊಂದಿಕೊಳ್ಳಬೇಕಿದೆ- ಜಯಾನಂದ ಮಾದರ ಮೂಡಲಗಿ: ದೇಶೀಯ ಕಲೆಗಳಿಂದ ನಾಡು ಶ್ರೀಮಂತವಾಗಿದೆ, ಕಲಾವಿದರು ಇಂದಿನ ಜಾಗತೀಕರಣಕ್ಕೆ ಹೊಂದಿಕೊಳ್ಳಲೇಬೇಕಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡಮಿಯ ಸದಸ್ಯ ಜಯಾನಂದ ಮಾದರ ಹೇಳಿದರು. ಅವರು ತಾಲೂಕಿನ ನಾಗನೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ರತ್ನ ಶ್ರೀ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ ಪ್ರತಿಷ್ಥಾನ ಹಾಗೂ ಕನ್ನಡ ಜಶನಪದ ಪರಿಷತ್ತು ಗೋಕಾಕ ತಾಲೂಕು ಘಟಕ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲಾ ಪ್ರದರ್ಶನ ಮತ್ತು ಸನ್ಮಾನ …
Read More »