ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …
Read More »Daily Archives: ಮಾರ್ಚ್ 22, 2022
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛತೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ಪುರಸಭೆಯಿಂದ ಮಂಗಳವಾರ ಇಲ್ಲಿಯ ಸರ್ಕಾರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 75ನೇ ಆಜಾದಿ ಕಿ ಅಮೃತಮಹೋತ್ಸವ ಅಂಗವಾಗಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ ‘ಸ್ವಚ್ಚತೆಯ ಬಗ್ಗೆ ಸಮುದಾಯದ ಜನರು ಕಾಳಜಿವಹಿಸಬೇಕು. ಸ್ವಚ್ಚತೆ ಇದ್ದರೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ಇರುತ್ತದೆ’ ಎಂದರು. ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು …
Read More »ಅಕಾಲಿಕ ಮಳೆಯ ಪರಿಣಾಮ ಸದಕ ಮತ್ತು ಗೋಧಿ ಬೆಳೆಗಳು ನೆಲಕ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಬಗರನಾಳ ಗ್ರಾಮದಲ್ಲಿ ಶನಿವಾರದಂದು ಸಂಜೆ ಗಾಳಿ ಮಿಶ್ರಿತ ಸುರಿದ ಅಕಾಲಿಕ ಮಳೆಯ ಪರಿಣಾಮ ಸದಕ ಮತ್ತು ಗೋಧಿ ಬೆಳೆಗಳು ನೆಲಕ್ಕೆರುಳಿದ್ದರಿಂದ ಈ ಭಾಗದ ರೈತರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಾಲ-ಶೂಲ ಮಾಡಿ ಬೀಜ ಗೊಬ್ಬರ ಹಾಕಿ ಕಷ್ಟಪಟ್ಟು ಸದಕ ಮತ್ತು ಗೋಧಿ ಬೆಳೆಗಳು ಬೆಳೆದು ಇನ್ನೇನು ಕಟಾವು ಹಂತಕ್ಕೆ ಬಂದಿದ್ದ ಅಪಾರ ಪ್ರಮಾಣದ ಬೆಳೆಗಳು ಅಕಾಲಿಕವಾಗಿ ಸುರಿದ ಈ ಮಳೆಯಿಂದ ನೆಲಕಚ್ಚಿ ಮಣ್ಣು ಪಾಲಾಗಿ …
Read More »ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಾರೆ
ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ರಾಜ್ಯದಲ್ಲಿಯೇ ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವದು ಸಂತಸದ ವಿಷಯವಾಗಿದೆ ಎಂದು ಬೆಳಗಾವಿ ಸಿಟಿಇ ಪ್ರಾಚಾರ್ಯರು ಹಾಗೂ ಸಹ ನಿರ್ದೇಶಕ ರಾಜೀಯ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ೮೧ ಪ್ರೌಢ ಶಾಲೆಗಳ ಮೇಲ್ವಿಚಾರಣೆ ಹಾಗೂ ೨೬ ಪರೀಕ್ಷಾ ಕೇಂದ್ರಗಳ ತಯಾರಿ ಕುರಿತು ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ …
Read More »