ಮೂಡಲಗಿ : ಮೇ.17ರಂದು ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವಕ್ಕೆ ಮಕ್ಕಳನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಮೂಡಲಗಿ ವಲಯದ 411 ಅಂಗನವಾಡಿಗಳು, ಕಾರ್ಯಕರ್ತೆಯರು ಸಿದ್ಧಗೊಂಡಿದ್ದಾರೆ ಎಂದು ಸಿಡಿಪಿಒ ಯಲ್ಲಪ್ಪ ಗದಾಡಿ ಹೇಳಿದರು. ರವಿವಾರದಂದ ಪ್ರತಿಕಾ ಪ್ರಕಟಣೆ ನೀಡಿದ ಅವರು, ಮಂಗಳವಾರದಂದು ಅಂಗನವಾಡಿ ಕೇಂದ್ರಗಳಿಗೆ ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಹೂವು ಕೊಟ್ಟು ಸ್ವಾಗತಿಸಲು ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ಮೇ 17ರಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪಾಲಕರೊಂದಿಗೆ ಮಕ್ಕಳನ್ನು ಕೇಂದ್ರಗಳಿಗೆ …
Read More »Daily Archives: ಮೇ 15, 2022
ಸರಕಾರದಿಂದ ದೊರೆಯುವ ಪ್ರತಿಯೊಂದು ಯೋಜನೆಗಳು ಮಗುವಿಗೆ ತಲುಪುವಲ್ಲಿ ಕ್ರಮ ಕೈಗೊಳ್ಳಲಾಗಿದೆ – ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಸಕ್ತ 2022-23 ನೇ ಸಾಲಿನ ಶೈಕ್ಷಣಿಕ ಸಾಲಿನ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸುವದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನು ಶೈಕ್ಷಣಿಕ ವಲಯಾದ್ಯಂತ ಮೇ. 16 ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಸರಕಾರಿ ಮಾದರಿ ಹಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿದ ಸ್ವಚ್ಚತಾ ಕಾರ್ಯದಲ್ಲಿ ಶ್ರಮದಾನ ಮಾಡಿದರು. ಮೂಡಲಗಿ ವಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ …
Read More »