Breaking News

Daily Archives: ಜೂನ್ 5, 2022

ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ – ಸಿದ್ದಣ್ಣ ದುರದುಂಡಿ

ಮೂಡಲಗಿ:  ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಡಿ ದೇವರಾಜ ಅರಸು ವಸತಿ ನಿಲಯದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮನ್ನು ಗಿಡಗಳನ್ನು …

Read More »

ನಾವು ಪ್ರತಿದಿನ ಉಸಿರಾಡಲು ಆಮ್ಲಜನಕ ಕೊಟ್ಟಿರುವ ಪ್ರಕೃತಿಗೆ ನಾವೇನಾದರೂ ಕೊಡುಗೆ ಕೊಡಲೇಬೇಕು- ಪಿಎಸ್‍ಐ ಎಚ್ ವೈ ಬಾಲದಂಡಿ

ಮೂಡಲಗಿ: ಪರಿಸರ ರಕ್ಷಿಸುವ ಜವಾಬ್ದಾರಿ ಮಾನವರದ್ದಾಗಿದೆ ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗದೆ ಪರಿಸರ ದಿನಾಚಾರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದು ಸ್ಥಳೀಯ ಪಿಎಸ್‍ಐ ಎಚ್ ವೈ ಬಾಲದಂಡಿ ಹೇಳಿದರು. ರವಿವಾರದಂದು ಪಟ್ಟಣದ ಗಂಗಾನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಆವರಣದಲ್ಲಿ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು ನಿರ್ಮಿಸಿದ ಉದ್ಯಾವನದ ಸಸಿಗೆ ನೀರುಣಿಸಿ ಮಾತನಾಡಿದ ಅವರು, ಈರಪ್ಪ …

Read More »

ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ

ಮೂಡಲಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ವಿಶ್ವ ಪರಿಸರ ದಿನವನ್ನು ಪರಿಸರದ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಉದ್ದೇಶದಿಂದ ವಿಶ್ವಸಂಸ್ಥೆಯು ಇದನ್ನು ಸ್ಥಾಪಿಸಿತು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ, ಪ್ರಕೃತಿಮಾತೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ …

Read More »

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ಉಪ ವಲಯ ಅರಣ್ಯಾಧಿಕಾರಿ ಜಾಫರಸಾಧಿಕ್ ಮುಜಾವರ

  ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ ಜಾಫರಸಾಧಿಕ್ ಮುಜಾವರ ಹೇಳಿದರು. ಘಟಪ್ರಭಾ ಅರಣ್ಯ ವಿಭಾಗ, ಗೋಕಾಕ, ಗೋಕಾಕ ಪ್ರಾದೇಶಿಕ ಅರಣ್ಯ ವಲಯದ ಸಹಯೋಗದಲ್ಲಿ ಜೂನ್.5 ರಂದು ಬೆಟಗೇರಿ ಗ್ರಾಮದ ಹೊರವಲಯದ ಗೈರಾಣ ಪ್ರದೇಶದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸನ್2022-23ನೇ ಸಾಲಿನ ಬೀಜ ಬಿತ್ತನೆ ಅಭಿಯಾನ …

Read More »