Breaking News

Daily Archives: ಸೆಪ್ಟೆಂಬರ್ 7, 2022

ಎಲ್ಲರೊಂದಿಗೆ ಬೆರೆಯುವ ಅಜಾತಶತ್ರು ಉಮೇಶ ಕತ್ತ

  ಮೂಡಲಗಿ: ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿದ ಬಾಲಶೇಖರ ಬಂದಿ ಹಾಗೂ ಎ.ಜಿ. ಶರಣಾರ್ಥಿ ಮಾತನಾಡಿ ‘ಉಮೇಶ ಕತ್ತಿ ಅವರು ಅಪ್ರತಿಮ ರಾಜಕಾರಣಿಯಾಗಿದ್ದರು. ಜನಪರ ಕಾರ್ಯಗಳನ್ನು ಮಾಡುವ ಮೂಲಕ ನಾಡಿನ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ’ ಎಂದರು. ‘ಎಲ್ಲರೊಂದಿಗೆ ಬೆರೆಯುವ ಅಜಾತಶತ್ರುವಾಗಿದ್ದ ಅವರ ನಿಧನದಿಂದ ಸಮಾಜಕ್ಕೆ ಹಾಗೂ ನಾಡಿಗೆ ತುಂಬಲಾರದಷ್ಟು …

Read More »

ಸೆ.12ರಂದು ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2021-22ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸೆ.12ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, 2021-22ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 …

Read More »

ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ: ಇಂಚಲದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ

ಬೆಟಗೇರಿ:ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರ ಕಳೆದು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ. ಸದ್ಗುರುವಿನ ಕೃಪಾ ಆರ್ಶೀವಾದಕ್ಕೆ ಪಾತ್ರರಾಗಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇಚೆಗೆ ನಡೆದ 38ನೇ ಸತ್ಸಂಗ ಸಮ್ಮೇಳನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ನಾವೆಲ್ಲರೂ ಮೊದಲು ಸದ್ಗುರುವಿನಿಂದ ಸುಜ್ಞಾನ ಪಡೆದು ಪುನೀತರಾಗೋಣ ಎಂದರು. ಹಳಕಟ್ಟಿಯ ನಿಜಗುಣ …

Read More »

ರಾಜ್ಯ ಮಟ್ಟದ ಟಗರಿನ ಪಂದ್ಯಾವಳಿ

ಮೂಡಲಗಿ: ರಾಜ್ಯ ಮಟ್ಟದ ಟಗರಿನ ಕಾಳಗಕ್ಕೆ ಅದ್ದೂರಿ ಚಾಲನೆ. ಟಗರಿನ ಕಾಳಗದಲ್ಲಿ ಸೊಲು ಗೆಲವು ಒಂದು ನಾಣ್ಯದ ಎರಡು ಮುಖಗಳಿದಂತೆ ಸೊತವರು ಕುಗ್ಗದೆ ಗೆದ್ದವರು ಹಿಗ್ಗದೆ ಆಟದ ಮನೊಬಾವ ಬೇಳಸಿಕೊಳಬೇಕು ಎಂದು ಮೂಡಲಗಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಹೇಳಿದರು. ಪಟ್ಟಣದ ಶಾಬಣ್ಣವರ ಗವಿತೋಟ ಶಾಲೆಯ ಮೈದಾನದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಹಮ್ಮಿಕೊಂಡಿದ ರಾಜ್ಯ ಮಟ್ಟದ ಟಗರಿನ ಕಾಳಗ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಭಾಗದ ಶಾಸಕರು …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. …

Read More »