Breaking News
Home / 2022 / ಅಕ್ಟೋಬರ್ (page 3)

Monthly Archives: ಅಕ್ಟೋಬರ್ 2022

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಅ. 19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ …

Read More »

ಕುಲಗೋಡ ಉಪ ರೈತ ಸಂಪರ್ಕ ಕೇಂದ್ರ ಉದ್ಘಾಟಿಸುತ್ತಿರುವ ಸರ್ವೋತ್ತಮ ಜಾರಕಿಹೊಳಿ

ಕುಲಗೋಡ: ಕುಲಗೋಡ ಸುತ್ತಮುತ್ತಲಿನ ರೈತರ ಅನಕೂಲಕ್ಕಾಗಿ ಉಪ ಕೇಂದ್ರ ತೆರೆಯಲಾಗಿದೆ. ರೈತರು ಆಧುನಿಕ ಕೇಷಿ ಯಂತ್ರೋಪಕರಣಗಳ ಉಪಯೋಗಿಸಿ ಉತ್ತಮ ಇಳುವರಿ ಪಡೆಯಲು ಮುಂದಾಗಿ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅರಭಾವಿಯ ಉಪ ಕೇಂದ್ರ ಕುಲಗೋಡ ಉದ್ಘಾಟಿಸಿ ಮಾತನಾಡಿ ರೈತರ ಕೃಷಿ ಇಲಾಖೆಯ ಯೋಜನೆ ಮತ್ತು ರಸಗೊಬ್ಬರ, ಬೀಜಕ್ಕಾಗಿ ಅರಭಾವಿಯ ಕೇಂದ್ರಕ್ಕೆ ಅಲೇದಾಡುವದನ್ನು ತಪ್ಪಿಸಲು …

Read More »

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ. ಮೂಡಲಗಿ : ಇಲ್ಲಿನ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಶಿವಪ್ಪ ಶಂಕರ ಬಳಿಗಾರ ಈ ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಸ್ತಿ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಎಲ್ಲ …

Read More »

ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ‘ಒಂದು ದೇಶ ಒಂದು ಗೊಬ್ಬರ’ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮುನ್ನಗ್ಗಲಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು …

Read More »

ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ

ಮೂಡಲಗಿ: ವಿದ್ಯಾರ್ಥಿಗಳು ದಿನನಿತ್ಯದ ಅಭ್ಯಾಸದೊಂದಿಗೆ ಪ್ರಾರ್ಥನೆ ಪೂಜೆ ಪುನಸ್ಕಾರಗಳನ್ನು ತಮ್ಮ ದಿನಚರಿಯಲ್ಲಿ ಬಳಸಿಕೊಂಡಾಗ ಶುದ್ದವಾದ ಭಕ್ತಿ ಮನಸ್ಸು ಅಭ್ಯಾಸದಲ್ಲಿ ಏಕಾಗ್ರತೆ ತರುತ್ತವೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಹೇಳಿದರು. ಅವರು ಸೋಮವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ, ಭಯ, ಭಕ್ತಿ, ಗುರುಹಿರಿಯರಿಗೆ ಗೌರವ, ನಮ್ಮ ನಾಡಿನ …

Read More »

ಶ್ರೀ ಭಗೀರಥ ಯುವತಿ ಮಂಡಳಿ ಉದ್ಘಾಟನೆ

ಮೂಡಲಗಿ: ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರತಿಶತ 50 ರಷ್ಟು ಅವಕಾಶಗಳಿದ್ದು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಮಾಜಿಕ ಸೇವೆ ಮತ್ತು ಸಂಘಟನೆ ಮಾಡಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಶ್ರೀ ಭಗೀರಥ ಯುವತಿ ಮಂಡಲ ನೋಂದಣಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ ಶ್ರೀ ಭಗೀರಥ ಯುವತಿ ಮಂಡಳಿ ಇವತ್ತು ಉದ್ಘಾಟನೆಯಾಗಿದ್ದು ಇದರ ಮುಖಾಂತರ ಹೊಲಿಗೆ ತರಬೇತಿ ಇನ್ನಿತರ …

Read More »

ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮ

ಮೂಡಲಗಿ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ತಾಲೂಕಿನ ಕುಲಗೋಡ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002-03 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಂದೆ-ತಾಯಿ ಹಾಗೂ ಗುರುವಿನ ಸ್ಮರಣೆ ಮಾಡುವುದರಿಂದ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಹೊರಹೊಮ್ಮುತ್ತಾರೆ. ಹೀಗಾಗಿ ಗುರುವಿನ ಸ್ಮರಣೆ ಮಾಡುವುದು …

Read More »

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳು ಮತ್ತು ಕಕಮರಿಯ ಶ್ರೀ ಗುರುಲಿಂಗ ಜಂಗಮ ಸ್ವಾಮೀಜಿಗಳ ಸಾನಿದ್ಯದಲ್ಲಿ ಜರುಗಿತು. ಗ್ರಂಥಾಲಯ ಉದ್ಘಾಟಿಸಿದ ಯುವ ನಾಯಕ ಸರ್ವೋತಮ ಜಾರಕಿಹೊಳಿ ಮಾತನಾಡಿ, ಪುಸ್ತಕ ಸ್ನೇಹ ಬೆಳೆಸುವುದದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೆ ಅಲ್ಲದೆ ಬುದ್ದಿಮತ್ತೆಯೂ …

Read More »

ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ

ಮೂಡಲಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ ಹಾಗೂ ಸಹಕಾರಿ ಸಂಘಗಳು ಗ್ರಾಹಕರಿಗೆ ನೀಡುತ್ತಿರುವ ಸೇವೆ ಮತ್ತು ಕಾರ್ಯದಕ್ಷತೆ ಪ್ರಶಂಸನೀಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.14 ರಂದು ಮೂಡಲಗಿ ನಗರದ ಶ್ರೀ ಅನ್ನಪೂರ್ಣೇಶ್ವರಿ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರ ಕ್ಷೇತ್ರ ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸುವ ಕೇಂದ್ರಗಳಾಗಿವೆ ಆ ಮೂಲಕ …

Read More »

ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ : ಇಂದಿನ ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ. ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಲಿಪಿಕ ನೌಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸಿಬ್ಬಂದಿಗಳಿಗೆ ತಂತ್ರಜ್ಞಾನ ಆಧಾರಿತ ಆಡಳಿತಾತ್ಮಕ ತರಬೇತಿಯ ಒಂದು ದಿನದ …

Read More »