ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣವು ಪ್ರಮುಖ ಹೋಬಳಿಯಾಗಿದ್ದು, ಸುತ್ತಮುತ್ತಲಿನ 50ಕ್ಕೂ ಅಧಿಕ ಗ್ರಾಮಗಳಿಗೆ …
Read More »Monthly Archives: ಫೆಬ್ರವರಿ 2023
ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಿ- ಭೀಮಪ್ಪ ಗಡಾದ
ಮೂಡಲಗಿ : ಅರಭಾಂವಿ ಕ್ಷೇತ್ರದಲ್ಲಿ ಸರಕಾರಕ್ಕ ಸೇರಿದ ಆಸ್ತಿಗಳ ಮೇಲೆ ಬಿಎಲ್‍ಜಿ ಎಂದು ಹಾಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಹೆಸರು ಬರೆಯುತ್ತಿದ್ದು ಇದನ್ನು ನೋಡುತ್ತಿದ್ದರೂ ಕೂಡಾ ಯಾವುದೇ ಕ್ರಮ ಕೈಗೊಳ್ಳದೇ ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ದಾಖಲೆಗಳ ಸಮೇತವಾಗಿ ದೂರು ನೀಡಲಾಗಿದೆ ಎಂದು ಮಾಹಿತಿ ಹಕ್ಕು …
Read More »ವಿಶ್ವಕರ್ಮ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಬೃಹತ ಸಮಾವೇಶ
ಮೂಡಲಗಿ : ವಿಶ್ವಕರ್ಮ ಸಮಾಜದ ಜನರಿಗೆ ಸ್ಥಳೀಯ ಗ್ರಾಪಂ, ಪುಸರಭೆ, ಜಿಪಂ ಗಳಲ್ಲಿ ಸ್ಥಾನಮಾನ ನೀಡಬೇಕು ಹಾಗೂ ನಮ್ಮ ಸಮಾಜಕ್ಕೆ ಸರ್ಕಾರದಿಂದ ಬರುವಂತ ಸೌಲಭ್ಯಗಳ ಕುರಿತು ಸಮಾಜದ ಜನರಿಗೆ ಮಾಹಿತಿ ನೀಡಿ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಪಟ್ಟಣದ ಬಸವ ಮಂಟಪದಲ್ಲಿ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಗಜಾನನ ಪತ್ತಾರ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ …
Read More »ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ
ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಕರ್ನಾಟಕಕ್ಕೆ ಕಳೆದ 5 ವರ್ಷಗಳಲ್ಲಿ ಎಸ್.ಸಿ ಗಳ ಸಾಮಾಜಿಕ ಉನ್ನತಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ರೂ. 1690.72 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ …
Read More »ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಾಡಳಿತದಿಂದ ಆಚರಿಸಲಾಗುವುದು- ತಹಶೀಲ್ದಾರ ಪ್ರಶಾಂತ ಚನಗೊಂಡ
ಮೂಡಲಗಿ: ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಹಾಗೂ ತಾಲೂಕಾಡಳಿತದಿಂದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಯಂತಿಯನ್ನು ಆಚರಿಸಲಾಗುವುದು ಇದೇ ಸಂದರ್ಭದಲ್ಲಿ ದಲಿತ ಸಮಾಜದಲ್ಲಿ ಇರುವಂತ ಹಿರಿಯ ಜನಪದ ಕಲಾವಿದರನ್ನು ಸತ್ಕರಿಸಿ ಗೌರವಿಸಲಾಗುವುದು ಎಂದು ತಹಶೀಲ್ದಾರ ಪ್ರಶಾಂತ ಚನಗೊಂಡ ಹೇಳಿದರು. ಶುಕ್ರವಾರದಂದು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜರುಗಿದ ದಲಿತ ವಚನಕಾರರ ಜಯಂತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ಜಯಂತಿಯನ್ನು …
Read More »ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು- ವರ್ಧಮಾನ ಬೋಳಿ
ಮೂಡಲಗಿಯ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಭವನದಲ್ಲಿ ಗುರುವಾರ ಜರುಗಿದ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ತರಬೇತಿ ಶಿಬಿರವನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು. ‘ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು’ ಮೂಡಲಗಿ: ‘ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕರು ಸಹಕಾರ ಇಲಾಖೆಯು ಮಾರ್ಪಡಿಸುವ ತಿದ್ದುಪಡಿಗಳು ಹಾಗೂ ಬದಲಾದ ಕಾನೂನು ಅನ್ವಯ ಸಂಘ, ಸಂಸ್ಥೆಗಳನ್ನು ನಿರ್ವಹಿಸಬೇಕು’ ಎಂದು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ …
Read More »ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ : ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ
ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು. ಇತ್ತಿಚ್ಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯುಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ …
Read More »ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿ : ಮೋಹಮನಕುಮಾರ ಹಂಚಾಟಿ
ಮೂಡಲಗಿ: ‘ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿಯಾಗಿದ್ದು, ಮಕ್ಕಳು ಕಲಿಕೆಯನ್ನು ಹಬ್ಬವನ್ನಾಗಿ ಸಂಭ್ರಮಿಸುವ ಅವಕಾಶವಾಗಿದೆ’ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಮೋಹಮನಕುಮಾರ ಹಂಚಾಟಿ ಹೇಳಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷತಾ ಇಲಾಖೆ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮೂರು ದಿನಗಲ ಚಿಕ್ಕೋಡಿ …
Read More »ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಈಗಾಗಲೇ ತಪಸಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದಲ್ಲಿ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಫೆ.8ರಂದು ನಡೆದ ರಾಷ್ಟ್ರೀಯ ಜಲಜೀವನ ಮಿಷನ್ ಮತ್ತು ಎಲ್‍ಎಂಎಂ ಯೋಜನೆಯ ಅನುದಾನದಡಿಯಲ್ಲಿ …
Read More »ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ
ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ ಮೂಡಲಗಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿ ಐ ಟಿ ಯು ಸಂಯೋಜಿತ) ಮೂಡಲಗಿ ತಾಲೂಕಾ ಸಮಿತಿಯಿಂದ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಗ್ರಾಮ ಪಂಚಾಯತ ನೌಕರರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳದೇ ಸಾಮಾಜಿಕವಾಗಿ, …
Read More »