Breaking News
Home / 2025

Yearly Archives: 2025

*ಕೌಜಲಗಿಯಲ್ಲಿ ೧೨ ಕೋಟಿ ರೂಪಾಯಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಕೌಜಲಗಿ: ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹೊಸ ಆಸ್ಪತ್ರೆಯನ್ನು ನೋಡುತ್ತಿದ್ದರೆ ದೂರದ ಬೆಳಗಾವಿ, ಬೆಂಗಳೂರು ಆಸ್ಪತ್ರೆಗಳನ್ನು …

Read More »

‘ಮೋಳಿಗೆ ಮಾರಯ್ಯ ಕಾಯಕನಿಷ್ಠ ಶರಣ’-ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ

ಮೂಡಲಗಿ: ‘ಬಸವಣ್ಣನವರ ತತ್ವ, ವ್ಯಕ್ತತ್ವದಿಂದ ಪ್ರಭಾವಿತರಾದ ಮೋಳಿಗೆ ಮಾರಯ್ಯ ತಮ್ಮ ವಚನಗಳಲ್ಲಿ ಡಂಭಾಚಾರವನ್ನು ಕಟುವಾಗಿ ಟೀಕಿಸಿದ ಕಾಯಕನಿಷ್ಠ ಶರಣ ಎಂದು ಗುರುತಿಸಿಕೊಂಡಿದ್ದರು’ ಎಂದು ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಲ್ಲಿ ಮೋಳಿಗೆ ಮಾರಯ್ಯ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ಮಾರಯ್ಯನವರು ಅಂತರಂಗ, ಬಹಿರಂಗದ ಶುದ್ಧತೆಯೇ ಭಕ್ತಿಯ ನಿಜವಾದ ಮಾರ್ಗವೆಂದು ಪ್ರತಿಪಾದಿಸಿದ್ದರು ಎಂದರು. …

Read More »

‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಉದ್ಘಾಟನೆ ಮತ್ತು ಪಾಲಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ದೇಶದ ಭವಿಷ್ಯದ ರೂವಾರಿಗಳಾಗುವ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿರುವ ಮಕ್ಕಳ ಮೇಲೆ ಹೆಚ್ಚು ಪ್ರೀತಿ ಇರಬೇಕು. ಬೆಳೆಯುತ್ತಾ …

Read More »

ದೇವರಾಜ ಅರಸು ವಸತಿ ಶಾಲೆಯು ನನ್ನ ಕ್ಷೇತ್ರಕ್ಕೆ ಬಂದಿರುವುದು ಅತೀವ ಸಂತಸವಾಗಿದೆ- ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ

ಮೂಡಲಗಿ: ರಾಜ್ಯದಲ್ಲಿರುವ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ ಮಂಜೂರಾಗಿರುವ ದೇವರಾಜ ಅರಸು ವಸತಿ ಶಾಲೆಯು ನನ್ನ ಕ್ಷೇತ್ರಕ್ಕೆ ಬಂದಿರುವುದು ಅತೀವ ಸಂತಸವಾಗಿದೆ. ಇದರಿಂದ 14 ವಿವಿಧ ವಸತಿ ಶಾಲೆಗಳನ್ನು ಹೊಂದಿರುವ ಅವಿಭಜಿತ ಗೋಕಾಕ ತಾಲ್ಲೂಕು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವುದು ಇತಿಹಾಸಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಶನಿವಾರದಂದು ಕಲ್ಲೊಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಿಂದುಳಿದ ವರ್ಗಗಳ …

Read More »

ನೀರಾವರಿ ಇಲಾಖೆಯಿಂದ 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಉದ್ಘಾಟಿಸಿದರು

ಮೂಡಲಗಿ: ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …

Read More »

ದೇಶ ಕಾಯುವ ಸೈನಿಕರ ಮತ್ತು ಅನ್ನದಾತರ ಋಣ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ – ಸಂತೋಷ ಪಾರ್ಶಿ

ಮೂಡಲಗಿ: ನಮ್ಮ ಭಾರತ ದೇಶವನ್ನು  ಮತ್ತು ದೇಶದ ಗಡಿಯನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ತಮ್ಮ ಪ್ರಾಣವನ್ನು ಲೆಕ್ಕಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಸೇವೆ ಅವಿಸ್ಮರಣಿಯವಾಗಿದ್ದು ಸೈನಿಕರ ಸೇವೆ ದೇಶಪ್ರೇಮ, ದೇಶಭಕ್ತಿ ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ. ನಾವುಗಳು ಸೈನಿಕರಿಗೆ ಗೌರವ ಕೊಡುವುದರೊಂದಿಗೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಿಕೊಳ್ಳುವುದು ಅಗತ್ಯವಿದ್ದು ದೇಶಕ್ಕಾಗಿ ವೀರಮರಣ ಹೊಂದಿದ ಸೈನಿಕರನ್ನು ಗೌರವಿಸೋಣ ಎಂದು ಮೂಡಲಗಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ    …

Read More »

ಸಂಗನಕೇರಿ ಪಟ್ಟಣದಲ್ಲಿ 50 ಲಕ್ಷ ರೂಪಾಯಿ ವೆಚ್ಚದ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. …

Read More »

ಸಾಲಹಳ್ಳಿಯಲ್ಲಿ ನಾಗನೂರ ಸಹಕಾರಿಯ ೧೫ನೇ ಶಾಖೆ ಉದ್ಘಾಟನೆ 

  ರಾಮದುರ್ಗ: ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ೧೫ನೇ ಶಾಖೆಯ ಉದ್ಘಾಟನಾ ಸಮಾರಂಭ ತಾಲೂಕಿನ ಸಾಲಹಳ್ಳಿ ಗ್ರಾಮದ ಮಹಾಂತೇಶ ನಗರದ ಶ್ರೀರಾಮ್ ಕಟ್ಟಡದಲ್ಲಿ ಶುಕ್ರವಾರ ಜು.೨೫ ರಂದು ಮುಂ.೧೧ ಗಂಟೆಗೆ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಸುಣಧೋಳಿಯ ಶ್ರೀ ಶಿವಾನಂದ ಮಹಾಸ್ವಾಮಿಗಳು, ಚಿಪ್ಪಲಕಟ್ಟಿಯ ಶ್ರೀ ಅಭಿನವ ಶಿದ್ಧಲಿಂಗ ಶಿವಾಚಾರ್ಯರು, ಕುಳ್ಳೂರದ ಶ್ರೀ ಬಸವಾನಂದ ಭಾರತಿ ಮಹಾಸ್ವಾಮಿಗಳು ವಹಿಸುವರು. ಶಾಸಕ ಅಶೋಕ ಪಟ್ಟಣ ಮತ್ತು …

Read More »

ಹಣಮಂತ ಗುರಪ್ಪ ತಿಪ್ಪಿಮನಿ ನಿಧನ

ಹಣಮಂತ ಗುರಪ್ಪ ತಿಪ್ಪಿಮನಿ ನಿಧನ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡದ ನಿವಾಸಿ ಶ್ರೀ ಹಣಮಂತ ಗುರಪ್ಪ ತಿಪ್ಪಿಮನಿ (60) ಅನಾರೋಗ್ಯದಿಂದ ಗುರುವಾರ ಸಂಜೆ 5 ಕ್ಕೆ ನಿಧನರಾಗಿದ್ದಾರೆ. ಇವರು ಘಟಪ್ರಭಾ ಜಗದ್ಗುರು ಗುರುಸಿದ್ದೇಶ್ವರ ಸಹಕಾರಿ ಆಸ್ಪತ್ರೆಯ ರಕ್ತ ತಪಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ.ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »