Breaking News

Daily Archives: ಸೆಪ್ಟೆಂಬರ್ 9, 2025

ದಿ.14 ರಂದು ಬೃಹತ ಸರ್ವ ಧರ್ಮ ವಧು-ವರರ ಮುಖಾಮುಖಿ ಸಮಾವೇಶ

ಮೂಡಲಗಿ : ನಮ್ಮ ಕನ್ನಡಿಗರ ಬಳಗ ಹಾಗೂ ಬನವಿ ಫೌಂಡೇಷನ್ ಗೋಕಾಕ್ ಸಂಯುಕ್ತಾಶ್ರಯದಲ್ಲಿ ರವಿವಾರ ದಿ.14ರಂದು ಬೆಳಗಾವಿ ನಗರದಲ್ಲಿ ಉಚಿತವಾಗಿ ಬೃಹತ ಸರ್ವ ಧರ್ಮ ವಧು-ವರರ ಮುಖಾಮುಖಿ ಸಮಾವೇಶ ಏರ್ಪಡಿಸಲಾಗಿದೆ ಎಂದು ನಮ್ಮ ಕನ್ನಡಿಗರ ಬಳಗ ಹಾಗೂ ಬನವಿ ಫೌಂಡೇಶನ್ ರಾಜ್ಯಾಧ್ಯಕ್ಷ ಬಾಲಚಂದ್ರ ಬನವಿ ತಿಳಿಸಿದರು. ಮಂಗಳವಾರದಂದು ಪಟ್ಟಣದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಧು-ವರರ ಸಮಾವೇಶವನ್ನು ಬೆಳಿಗ್ಗೆ 10-00 ರಿಂದ ಸಂಜೆ 4-00 ಫಂಟೆಯವರೆಗೆ ಬೆಳಗಾವಿಯ ಶ್ರೀ ಶಿವಬಸವ ಶಿವಾಲಯ …

Read More »

ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಸದ್ಗುರು ಯಾಲ್ಲಾಲಿಂಗ ಪಿಯು ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಕೆಂಚಪ್ಪ ಮಯತ್ತೆಪ್ಪ ಬೋರಗುಂಡಿ ಇತನು ಮರಡಿಮಠದಲ್ಲಿ ಸೆ.8ರಂದು ನಡೆದ ಜಿಲ್ಲಾ ಮಟ್ಟದ ಸೈಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸೈಕಿಂಗ್ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ಕಾಲೇಜು ವಿದ್ಯಾರ್ಥಿ ಕೆಂಚಪ್ಪ ಬೋರಗುಂಡಿ ಸಾಧನೆಗೆ ಮೆಚ್ಚುಗೆ …

Read More »

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಿಸಿಕೊಡುವ ದೃಷ್ಟಿಯಿಂದ ಪ್ರಚಾರ ಸಭೆಯನ್ನು ನಡೆಸಿರುವ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಅಕ್ಟೋಬರ್ …

Read More »

*ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ*

ಬೆಳಗಾವಿ: ಚಿಕ್ಕಮಕ್ಕಳ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರವನ್ನು ಅರಿಹಂತ ಆಸ್ಪತ್ರೆ, ನೆಹರು ನಗರ, ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮಾಲೋಚನೆ ನೀಡಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಉಚಿತ ಶಸ್ತ್ರಚಿಕಿತ್ಸಾ ಚಿಕಿತ್ಸಾ ಸೌಲಭ್ಯ ಸಹ ಲಭ್ಯವಿರುತ್ತದೆ. ಶಿಬಿರವು 13 ಸೆಪ್ಟೆಂಬರ್ 2025, ಶನಿವಾರ, ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಚಿಕ್ಕಮಕ್ಕಳ ಹೃದಯ ತಜ್ಞ ಡಾ. ಗೋವಿಂದ್ …

Read More »