ಕಣಗಲಾ(ತಾ.ಹುಕ್ಕೇರಿ): ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ತಿಳಿಸಿದರು. ಲಿಂಗಾಯತರು, ಹಾಲುಮತ, …
Read More »Daily Archives: ಸೆಪ್ಟೆಂಬರ್ 17, 2025
ದಿ.18ರಂದು ವೇಮನ್ ಕೋ-ಆಪ್.ಸೊಸಾಯಿಟಿಯ 24ನೇ ಸರ್ವಸಾಧಾರಣ ಸಭೆ
ಮೂಡಲಗಿ: ಪಟ್ಟಣದ ಪತಿಷ್ಠಿತ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿ ಲಿ. ಮೂಡಲಗಿಯ ಸನ್ 2024-2025ನೇ ಸಾಲಿನ 24ನೇ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಗುರುವಾರ ದಿ.18ರಂದು ಮುಂಜಾನೆ 10-00 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದು ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷರಾದ ಸಂತೋಷ ಕೃ. ಸೋನವಾಲಕರ ರವರ ವಹಿಸಲಿದ್ದು ಸಂಘದ ಸರ್ವ ಸದಸ್ಯರು ಸರಿಯಾದ ವೇಳೆಗೆ ಆಗಮಿಸಬೇಕೆಂದು ಸಂಘದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.
Read More »ವಿಶ್ವಕರ್ಮ ಲೋಕಕ್ಕೆ ಗುರು – ಶ್ರೀಶೈಲ ಗುಡುಮೆ
ಮೂಡಲಗಿ: ವಿಶ್ವಕರ್ಮನು ಜಗತ್ತಿನ ಸೃಷ್ಟಿಕರ್ತನಾಗಿದ್ದು, ಲೋಕದ ಸ್ಥಿತಿ- ಲಯಾಧಿಗಳಿಗೆ ಕಾರಕನಾಗಿ ಲೋಕಕ್ಕೆ ಗುರುವಾಗಿದ್ದಾನೆ ಎಂದು ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ ಹೇಳಿದರು. ಪಟ್ಟಣದಲ್ಲಿ ಬುಧವಾರ ಮೂಡಲಗಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಮೂಡಲಗಿ ವಿಶ್ವಕರ್ಮ ಸಮಾಜದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮನ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿ ಡಾ. ರಾಜು ಕಂಬಾರ …
Read More »ವಿಶ್ವಕರ್ಮ ಒಬ್ಬ ದೇವಶಿಲ್ಪಿಯಾಗಿದ್ದಾನೆ: ಬಸವಂತ ಕೋಣಿ
ಬೆಟಗೇರಿ:ದೇವಶಿಲ್ಪಿ ವಿಶ್ವಕರ್ಮನು ವಿಶ್ವ ಮತ್ತು ಬ್ರಹ್ಮಾಂಡದ ಸಂಪೂರ್ಣ ಸೃಷ್ಠಿಕರ್ತನಾಗಿದ್ದಾನೆ. ಬ್ರಹ್ಮಾಂಡ ತುಂಬೆಲ್ಲಾ ವ್ಯಾಪಿಸಿದ್ದಾನೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17ರಂದು ನಡೆದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಮಾತನಾಡಿ, ವಿಶ್ವಕರ್ಮ ಒಬ್ಬ ದೇವಶಿಲ್ಪಿಯಾಗಿದ್ದಾನೆ ಎಂದರು. ಸ್ಥಳೀಯ ವಿಶ್ವಕರ್ಮ ಸಮುದಾಯದ ಯುವ ಮುಖಂಡ …
Read More »