ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷರು ಮತ್ತು ಮಂಡಳಿಯವರು ಸೊಸಾಯಿಟಿಯ ಸಭಾ ಭವನದಲ್ಲಿ ಶುಕ್ರವಾರದಂದು ಸತ್ಕರಿಸಿ ಗೌರವಿಸಿದರು. ಸತ್ಕಾರ ಸ್ವೀಕರಿಸಿದ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಬ್ಬೂರ ಮಾತನಾಡಿ, ಈ ಭಾಗದ ರೈತರ ಆಶಾಕಿರಣವಾದ ಘಟಪ್ರಭಾ …
Read More »Daily Archives: ಅಕ್ಟೋಬರ್ 10, 2025
*ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …
Read More »*ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ*
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನಲ್‌ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್‌ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ …
Read More »
IN MUDALGI Latest Kannada News