ಮೂಡಲಗಿ: ಕಲ್ಲೋಳಿ ಪಿಕೆಪಿಎಸ್ ದಲ್ಲಿ ಆರಂಭಗೊಂಡ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೀ ಯೋಜನೆಯಾದ ಸಾಮಾನ್ಯ ಸೇವಾ ಕೇಂದ್ರವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪಿಕೆಪಿಎಸ್ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಆವರಣದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಭೀಮಪ್ಪ ಹಣಮಂತ ವ್ಯಾಪಾರಿ ನಿರ್ದೇಶಕರಾದ ಬಸವರಾಜ …
Read More »Yearly Archives: 2025
“ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ” ಸತೀಶ ಶುಗರ್ಸ 25 ವರ್ಷಗಳನ್ನು ಪೂರೈಸಿ ಯಶಸ್ಸಿನತ್ತ ಸಾಗುತ್ತಿದೆ- ತಳವಾರ
ಮೂಡಲಗಿ: ರೈತಬಾಂಧವರ ನಿರಂತರ ಸಹಕಾರ ಮತ್ತು ಕಾರ್ಮಿಕರ ಮತ್ತು ಸಿಬ್ಬಂದಿಯವರ ಅವಿರತ ಸೇವೆಯಿಂದಾಗಿ ಸತೀಶ ಶುಗರ್ಸ ಕಾರ್ಖಾನೆಯು 25 ವರ್ಷಗಳನ್ನು ಪೂರೈಸಿ ಯಶಸ್ಸಿನತ್ತ ಸಾಗುತ್ತಿದೆ ಎಂದು ಸತೀಶ ಶುಗರ್ಸ ಕಾರ್ಖಾನೆಯ ತಾಂತ್ರಿಕ ವಿಭಾಗದ ಉಪಾಧ್ಯಕ್ಷ ವೀರು ತಳವಾರ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯ ಜರುಗಿದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಮಾತನಾಡಿ, ಸ್ವಾತಂತ್ರಕ್ಕಾಗಿ ತ್ಯಾಗ-ಬಲಿದಾನಗಳನ್ನು ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೋಬ್ಬರು ಸ್ಮರಿಸಬೇಕು, ದೇಶ …
Read More »ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ* *10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ* *10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. ಮೇವು ಕತ್ತರಿಸುವ ಯಂತ್ರಗಳು, ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಬೆಳಗಾವಿ: ಜಿಲ್ಲಾ ಹಾಲು ಒಕ್ಕೂಟಕ್ಕೆ …
Read More »ಹಬ್ಬದಲ್ಲಿ ನಿಯಮ ಪಾಲಿಸಿ – ಸಿಪಿಐ ಶ್ರೀಶೈಲ ಬ್ಯಾಕೂಡ
ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜರುಗಿದ ಶಾಂತಿ ಸಭೆಯಲ್ಲಿ ಸಿಪಿಐ ಶ್ರೀಶೈಲ ಬ್ಯಾಕೂಡ ಮಾತನಾಡಿದರು. ಮೂಡಲಗಿ: ಗಣೇಶೋತ್ಸವ ಮತ್ತು ಈದ್ ಮಿಲಾದ್ ವೇಳೆ ನಿಯಮ ಮೀರಿ ಯಾರೇ ನಡೆದುಕೊಂಡರೆ ನಿರ್ಧಾಕ್ಷಿನಿವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಹಬ್ಬಗಳನ್ನು ಸಂಪ್ರದಾಯದಂತೆ ಆಚರಿಸಬೇಕು. ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಹಿಂದೂ-ಮುಸ್ಲಿಂ ಭಾಂದವರು ಶಾಂತಿ ಸೌರ್ಹಾದದಿಂದ ಆಚರಿಸಬೇಕು ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. …
Read More »ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ – ಸುಭಾಷ್ ಪಾಟೀಲ
ಮೂಡಲಗಿ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ ಎಂದು ಭಾರತಿ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಹೇಳಿದರು. ಅವರು ಮೂಡಲಗಿ ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ನನ್ನ ಭಾರತ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು- ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಬ್ರಿಟಿಷ್ ರೊಂದಿಗೆ ಹೋರಾಡಿ ದೇಶವು ಸ್ವತಂತ್ರಗೊಳ್ಳಲು ಕಾರಣೀಕರ್ತರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು. ರಾಯಣ್ಣನಂತಹ ದೇಶ ಪ್ರೇಮಿಗಳನ್ನು ಒಂದೇ ಜಾತಿಗೆ ಸೀಮಿತ ಮಾಡಬೇಡಿ ಎಂದು ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಮಾಜ ಬಾಂಧವರಿಗೆ ಕಿವಿಮಾತು ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಬಳೋಬಾಳ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ …
Read More »ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮ
ಕುಲಗೋಡ : ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆ ಮನ್ನಿಕೇರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶ್ರೀ ಬಸವರಾಜ ಮುನವಳ್ಳಿ 20,000 ರೂಪಾಯಿ ನಗದು ಬಹುಮಾನ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ …
Read More »ರಾಧಾ ಕೃಷ್ಣನ ವೇಷಭೂಷಣದಲ್ಲಿ ಗಮನಸೆಳೆದ ಮಕ್ಕಳು
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್.ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಕ್ಕಳು ರಾಧಾ ಕೃಷ್ಣನ ವೇಷಭೂಷನ ಗಮನಸೆಳೆಯಿತು. ಶ್ರೀ ಕೃಷ್ಣ ಮೂರ್ತಿಗೆ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ಅವರು ಪೂಜೆಸಲ್ಲಿಸಿ ಮಾತನಾಡಿ, ಮಕ್ಕಳು ಅರೋಗ್ಯ ಮತ್ತು ಖುಷಿಯಾಗಿ ಇರಲು ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಬಹಳ ಮುಖ್ಯ ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕ ಸಂದೀಪ್ ಸೋನವಾಲಕರ ಮಾತನಾಡಿ, ಇಂದಿನ ತಂತ್ರಜ್ಞಾನ …
Read More »ಬಾಲಕಿ ಭುವನಾ ಅವಳು ಬಾಲ ಶ್ರೀಕೃಷ್ಣನ ವೇಷಭೂಷಣ
ಬೆಣ್ಣೆ ಕಳ್ಳ ಬಾಲಕೃಷ್ಣ…. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಾಲಕಿ ಭುವನಾ ಶಿವರುದ್ರಗೌಡ ದೇಯಣ್ಣವರ ಅವಳು ಶನಿವಾರದಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಾಲ ಶ್ರೀಕೃಷ್ಣನ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದಳು.
Read More »ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‍ಐ ಬಿ.ಆನಂದ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಸೌಹಾರ್ದತೆಯಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಬಿ. ಆನಂದ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು ನಡೆದ …
Read More »
IN MUDALGI Latest Kannada News