Breaking News

Daily Archives: ಏಪ್ರಿಲ್ 14, 2026

*ಡಾ. ಅಂಬೇಡ್ಕರ್ ಎಲ್ಲ ಸಮುದಾಯಗಳ ಆಸ್ತಿ- ಲಕ್ಕಪ್ಪ ಲೋಕುರಿ* *ಅರಭಾವಿ ಬಿಜೆಪಿ ಮಂಡಲದಿಂದ ಅಂಬೇಡ್ಕರ್ ಜಯಂತಿ ಆಚರಣೆ*

ಗೋಕಾಕ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.‌ಅಂಬೇಡ್ಕರ್ ಜಯಂತಿಯನ್ನು ಅರಭಾವಿ ಬಿಜೆಪಿ ಮಂಡಲದಿಂದ ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಆಚರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಈ ಸಂದರ್ಭದಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಾಷ್ಟ್ರದ ಉನ್ನತಿ, ಪ್ರಗತಿಗಾಗಿ ಶ್ರಮಿಸಿರುವ ಮಹಾನ್ ವ್ಯಕ್ತಿ. ಪ್ರಪಂಚದಲ್ಲಿಯೇ ಎಲ್ಲರೂ ಮೆಚ್ಚುವಂತಹ ಸಂವಿಧಾನವನ್ನು ರಚನೆ ಮಾಡಿದ್ದಾರೆ. ನಮ್ಮ ದೇಶವು ಇಂದು ಶಿಕ್ಷಣದಲ್ಲಿ ಮುಂದುವರೆದು ಉನ್ನತ ಸ್ಥಾನ,ಮಾನ ಬರುತ್ತದೆಂದರೆ ಅದಕ್ಕೆ ಅಂಬೇಡ್ಕರ್ ಅವರು ಕಾರಣರು.‌ …

Read More »

ಡಾ.ಬಿ.ಆರ್.ಅಂಬೇಡ್ಕರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ: ಚಿದಾನಂದ ತಳವಾರ

ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದ ತಳವಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ …

Read More »