Breaking News
Home / Recent Posts / ಬೆಟಗೇರಿ ಗ್ರಾಮದಲ್ಲಿ ಐದು ದಿನ ಕಟ್ಟಾ ವಾರ ಆಚರಣೆ

ಬೆಟಗೇರಿ ಗ್ರಾಮದಲ್ಲಿ ಐದು ದಿನ ಕಟ್ಟಾ ವಾರ ಆಚರಣೆ

Spread the love

ಗಬೆಟಗೇರಿ:ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಕಟ್ಟಾ ವಾರ ಹಿಡಿದ ಹಿನ್ನಲೆಯಲ್ಲಿ ಗ್ರಾಮದ ಪ್ರಮುಖ ಓಣಿಯ ಬೀದಿ, ಮುಖ್ಯ ಸ್ಥಳಗಳು ಮಂಗಳವಾರ ಜು.5ರಂದು ಬೀಕೂ ಎನ್ನುತ್ತಿದ್ದವು.
ಜು.5 ರಂದು ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ ನಾಲ್ಕು ದಿಕ್ಕುಗಳ ಮುಖ್ಯ ರಸ್ತೆಗಳಿಗೆ ಊರಿನ ಸೀಮೆಗೆ ಕರಿ ಕಟ್ಟುವದು ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಕಟ್ಟಾ ವಾರ ಆಚರಣೆ:ಬೆಟಗೇರಿ ಗ್ರಾಮದಲ್ಲಿ ನಮ್ಮ ಪುರ್ವಜರು ವಾರ ಬಿಡುವ ಪದ್ದತಿ ಅನುಸರಿಸಿಕೊಂಡು ಬಂದಿದ್ದರಿಂದ ವಾರದ ಇದೇ ಮಂಗಳವಾರ ಜು.5 ಸೇರಿದಂತೆ ಮುಂದೆ ಬರುವ ವಾರದ ಪ್ರತಿ ಮಂಗಳವಾರ ಜು.12, ಜು.19, ಜು.26ರಂದು ಒಟ್ಟು ನಾಲ್ಕು ಮಂಗಳವಾರ ಮತ್ತು ಶುಕ್ರವಾರ ಜು.15, ಒಂದು ದಿನವನ್ನು ಸಂಪ್ರದಾಯದಂತೆ ವಾರ ಹಿಡಿಯಲಾಗಿದೆ. ಒಟ್ಟು 5 ವಾರದ ದಿನ ಅಂತಾ ಇಡೀ ಗ್ರಾಮದ ರೈತರ್ಯಾರೂ ವಾರದ ಈ 5 ದಿನಗಳಂದು ಕೃಷಿ ಚಟುವಟಿಕೆ ಕೈಗೊಳ್ಳುವಂತಿಲ್ಲ, ವಾರದ ದಿನ ಎಲ್ಲರ ಮನೆಯಲ್ಲೂ ರೊಟ್ಟಿ ಮಾಡುವಂತಿಲ್ಲ, ವಗ್ಗರಣೆಯಂತೂ ಹಾಕುವಂತಿಲ್ಲ, ಮಾಂಸಾಹಾರ ಅಡುಗೆ ತಯಾರಿಸುವಂತಿಲ್ಲ, ಊರಿನಲ್ಲಿರುವ ಕಿರಾಣಿ, ಮದ್ಯದಂಗಡಿ, ಚಹಾಅಂಗಡಿ, ಪಾನ್ ಬೀಡಾಂಗಡಿಗಳು ಸೇರಿದಂತೆ ಹೇರ್‍ಕಟಿಂಗ್ ಅಂಗಡಿ ಸಹ ಬಾಗಿಲು ತೆರೆಯದೇ ಬಂದ್ ಮಾಡಲಾಗುವುದು. ಹೀಗಾಗಿ ವಾರ ಹಿಡಿದ ಪ್ರಯುಕ್ತ 5 ಮಂಗಳವಾರ ದಿನ ಗ್ರಾಮ ಸಂಪೂರ್ಣ ಬಂದ್ ಆಚರಿಸಿದಂತಿರುತ್ತದೆ ಎಂದು ಸ್ಥಳೀಯ ವಾರ ಹಿಡಿದ ಆಯೋಜನೆ ಸಮಿತಿಯ ಹಿರಿಯ ನಾಗರಿಕ ಮಾಯಪ್ಪ ಬಾಣಸಿ ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ