ಮೂಡಲಗಿ: ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ, ತಮಿಳುನಾಡಿನಿಂದ ಸಂಗೀತ ನಿರ್ದೇಶಕರಾದ ಇಳಯರಾಜ, ಕೇರಳದಿಂದ ಪ್ರಸಿದ್ಧ ಕ್ರೀಡಾಪಟು ಪಿ.ಟಿ ಉಷಾ ಹಾಗೂ ಆಂಧ್ರಪ್ರದೇಶದಿಂದ ಖ್ಯಾತ ಕಥೆಗಾರರಾದ ವಿಜಯೇಂದ್ರ ಪ್ರಸಾದ್ ಅವರನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದರು.
ಹಲವು ದಶಕಗಳಿಂದ ಧಾರ್ಮಿಕ, ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿಯಲ್ಲಿ ಮಹೋನ್ನತ ಸೇವೆ ಸಲ್ಲಿಸುತ್ತಿರುವ ಪರಮಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ನೇಮಕಗೊಂಡಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಭಾರತದಿಂದ ನಾಲ್ವರು ಸದಸ್ಯರು ರಾಜ್ಯಸಭೆಗೆ ನಾಮನಿರ್ದೇಶಿತಗೊಂಡಿರುವುದು ಹೆಚ್ಚು ಸಂತಸ ತಂದಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣ ಭಾರತದ ಅಭಿವೃದ್ಧಿಗೆ ವಿಶೇಷವಾದ ಒತ್ತು ನೀಡುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಧಾರ್ಮಿಕ, ಕ್ರೀಡೆ, ಸಂಗೀತ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಮೇರು ಸಾಧನೆಗೈದ ಮಹನೀಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವುದು, ಇನ್ನಿಲ್ಲದ ಹೆಮ್ಮೆಯನ್ನು ಮೂಡಿಸಿದೆ. ಇವರ ಆಯ್ಕೆಯಿಂದ ರಾಜ್ಯಸಭೆಯ ಘನತೆ ಹೆಚ್ಚಾಗಲಿದೆ ಎಂದು ಸಂಸದ ಈರಣ್ಣ ಕಡಾಡಿ ಪತ್ರಿಕಾ ಹೇಳಿಕೆ ನೀಡಿದರು.
Home / Recent Posts / ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …