ಗುಣಮಟ್ಟದ ಆಹಾರ ಪದಾರ್ಥ ಸೇವನೆಯಿಂದ ಶಾರೀರಕ ಸದೃಢತೆ ಹೆಚ್ಚುತ್ತದೆ: ವೈ.ಸಿ.ಶೀಗಿಹಳ್ಳಿ
ಬೆಟಗೇರಿ:ಪ್ರತಿ ದಿನ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಶಾರೀರಕ ಸದೃಢತೆ ಹೆಚ್ಚುತ್ತದೆಲ್ಲದೇ, ಮನುಷ್ಯನ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಸೆ.16ರಂದು ಮದ್ಯಾಹ್ನ ಬಿಸಿಯೂಟ ಯೋಜನೆಯಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಹಮ್ಮಿಕೊಂಡ ಪೋಷಣ ಅಭಿಯಾನ ಯೋಜನೆಯ ಆಹಾರ ಮೇಳ ಆಯೋಜನೆಯ ನೇತೃತ್ವ ವಹಿಸಿ ಮಾತನಾಡಿದರು.
ಉತ್ತಮ ಗುಣಮಟ್ಟದ ತರಕಾರಿ, ವಿವಿಧ ಧಾನ್ಯಗಳು, ಹಣ್ಣುಗಳನ್ನು ದಿನನಿತ್ಯ ಬಳಸುವುದರಿಂದ ಆಗುವ ವಿವಿಧ ಪ್ರಯೋಜನಗಳ ಕುರಿತು ಉಭಯ ಶಾಲಾ ಮಕ್ಕಳಿಗೆ ಮುಖ್ಯೋಪಾಧ್ಯಯ ವೈ.ಸಿ.ಶೀಗಿಹಳ್ಳಿ ತಿಳಿಸಿದರು. ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ಎಸ್.ವೈ.ಸನದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಭಯ ಶಾಲೆಯ ಮಕ್ಕಳಿಂದ ವಿವಿಧ ಆಹಾರ ಧಾನ್ಯ, ಹಣ್ಣು, ತರಕಾರಿ ಸೇರಿದಂತೆ ಆಹಾರ ಸೇವನೆಯ ಪದಾರ್ಥಗಳನ್ನು ಸಂಗ್ರಹಿಸಿ ಪ್ರದರ್ಶಿಸಿ, ಶಾಲಾ ಮಕ್ಕಳಿಗೆ ಮನವರಿಕೆ ಮಾಡಿ ಆಹಾರ ಮೇಳ ಕಾರ್ಯಕ್ರಮ ಯಶಸ್ವಿಯಾಯಿತು. ಉಭಯ ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿ ಪಾಲಕರು, ಪೋಷಕರು, ವಿದ್ಯಾರ್ಥಿಗಳು, ಇತರರು ಇದ್ದರು.
.