Breaking News
Home / Recent Posts / ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡ ಉದ್ಘಾಟನೆ

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡ ಉದ್ಘಾಟನೆ

Spread the love

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡ ಉದ್ಘಾಟನೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ ಸೆ.21ರಂದು ಮುಂಜಾನೆ 10.30ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ.
ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಜಿ ದಿವ್ಯ ಸಾನಿಧ್ಯ, ಸುಣಧೋಳಿಯ ಅಭಿನವ ಶಿವಾನಂದ ಮಹಾಸ್ವಾಮಿಜಿ ನೇತೃತ್ವ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟನೆ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಜ್ಯೋತಿ ಬೆಳಗಿಸಲಿದ್ದು, ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ, ನಿರ್ದೇಶಕರಾದ ಶಿವಾನಂದ ಡೋಣಿ, ನೀಲಕಂಠ ಕಪ್ಪಲಗುದ್ದಿ, ಸತೀಶ ಕಡಾಡಿ, ಬೆಳಗಾವಿ ಉಪನಿಬಂಧಕ ಎಮ್.ಎನ್.ಮಣಿ, ಪಿಕೆಪಿಎಸ್ ಉಪಾಧ್ಯಕ್ಷ ಧರೆಪ್ಪ ಚಂದರಗಿ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬೈಲಹೊಂಗಲದ ಸಹಾಯಕ ನಿಬಂಧಕಿ ಶಾಹಿನ್ ಅಖ್ತರ್, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕ ಎಸ್.ಸಿ.ಶೆಟ್ಟಿಮನಿ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಎಲ್&ಓ ಉಪಪ್ರಧಾನ ವ್ಯವಸ್ಥಾಪಕ ಎನ್.ಜಿ.ಕಲಾವಂತ, ಗೋಕಾಕ ತಾಲೂಕಾ ನಿಯಂತ್ರಣಾಧಿಕಾರಿ ಎಮ್.ಎಮ್.ಕುರಬೇಟ, ಗೋಕಾಕ ಪೂರ್ವಭಾಗದ ಬ್ಯಾಂಕ್ ನಿರೀಕ್ಷಕ ಆರ್.ಎಸ್.ಸನದಿ, ಮಮದಾಪೂರ ಬಿಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ವಿನೋದಕುಮಾರ ವಾಲಿ, ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ, ಗೋಕಾಕ ಸನ್ನದ್ದು ಲೆಕ್ಕಪರಿಶೋಧಕ ಸೈದಪ್ಪ ಗದಾಡಿ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ತಾಪಂ, ಗ್ರಾಪಂ, ಪಿಕೆಪಿಎಸ್ ಹಾಗೂ ವಿವಿಧ ಸಂಘ, ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಹಕಾರಿ ಧುರೀಣರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ