Breaking News
Home / Recent Posts / ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ

ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ

Spread the love

ಮೂಡಲಗಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವುದು ಅಗತ್ಯ ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಜನರಿಗೆ ಕಾರ್ಯಕ್ರಮ ಮಾಡುವ ಮೂಲಕ ಜಾಗೃತಿ ಮಾಡಿಸಲಾಗುತ್ತಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಜಯಶ್ರೀ ಕಂಬಾರ ಹೇಳಿದರು.

ಪಟ್ಟಣದ ಜವಳಪ್ಲಾಟ್ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಳ್ಳಲಾದ ಕಿಶೋರಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಪೌಷ್ಠಿಕ ಆಹಾರ ಸೇವಿಸಬೇಕು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಹಸಿರು ಸೊಪ್ಪು ಆಹಾರವನ್ನು ಸೇವಿಸುವುದರಿಂದ ತಮ್ಮ ಆರೋಗ್ಯದಲ್ಲಿ ಹಾಗೂ ಹುಟ್ಟುವ ಮಕ್ಕಳು ಕೂಡಾ ಉತ್ತಮವಾಗಿ ಬೆಳವಣಿಗೆಯನ್ನು ಕಾಣಬಹುದು ಎಂದು ಹೇಳಿದರು.

ಅಂಗನವಾಡಿ ಮೇಲ್ವಿಚಾರಕಿ ಕಮಲಾ ಕನಶೆಟ್ಟಿ ಮಾತನಾಡಿ, ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಭಾರ ಎಂಬ ಭಾವನೆ ಇನ್ನೂ ಸಮಾಜದಿಂದ ದೂರವಾಗಿಲ್ಲ. ಮದುವೆಯ ನಿರ್ದಿಷ್ಟ ವಯಸ್ಸಿಗೆ ಮೊದಲೇ ಬಾಲ್ಯ ವಿವಾಹ ಮಾಡಿಸಿ, ಕೈ ತೊಳಿಎದುಕೊಳ್ಳುವ ಸಾಮಾಜಿಕ ಪಿಡುಗು ಇಂದಿಗೂ ಕೆಲವು ಕಡೆಗಳಲ್ಲಿ ನಡೆಯುತ್ತಿದೆ. ಇದಕ್ಕೆ ಕಾರಣ ಕುಟುಂಬದಲ್ಲಿನ ಅರಿವಿನ ಕೊರತೆ, ಅನಕ್ಷರತೆ, ಬಡತನ, ಮೂಢನಂಬಿಕೆ, ಸಂಪ್ರದಾಯಗಳು ಇತ್ಯಾದಿ ಹತ್ತಾರು ಕಾರಣಗಳಿಗಾಗಿ ಬಾಲ್ಯ ವಿವಾಹಳು ನಡೆಯುತ್ತಲೇ ಇವೆ. ಹಾಗಾಗಿ ಹೆಣ್ಣು ಮಕ್ಕಳ ರಕ್ಷಣೆಯ ದೃಷ್ಠಿಯಿಂದ ಬಾಲ್ಯ ವಿವಾಹವನ್ನು ತಡೆಗಟ್ಟುವ ಕಾರ್ಯ ಇಲಾಖೆಯಿಂದ ಮಾತ್ರವಲ್ಲದೇ ಸಾರ್ವಜನಿಕರಿಂದಲು ಆಗಬೇಕು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಮರೆನಬಿ ಹೂಗಾರ, ವಾರ್ಡಿನ ಮುಖಂಡ ಬಸು ಝಂಡೆಕುರಬರ, ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್ ಎಸ್ ಪವಾರ, ಅಂಗನವಾಡಿ ಕಾರ್ಯಕರ್ತೆಯರಾದ ದೀಪಾಶ್ರೀ ದೇಸೂರಕರ, ಕಲಾವತಿ ನಂದಗಾಂವಮಠ, ಜಯಶ್ರೀ ಮಠಮತಿ, ಲಕ್ಷ್ಮೀ ಹೊಸೂರ, ಆಶಾ ಕಾರ್ಯಕರ್ತೆಯರಾದ ರತ್ನಾ ಹಳ್ಳಿ, ಸಂಗೀತಾ ಸಣ್ಣಕ್ಕಿ, ರೇಖಾ ಅವರಾದಿ, ಮಂಜುಳಾ ಢವಳೇಶ್ವರ, ರೀಟಾ ತಳವಾರ, ಶೋಭಾ ಕಂಬಾರ ಹಾಗೂ ಸಾರ್ವಜನಿಕರು ಮಕ್ಕಳು ಇದ್ದರು.

 


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ