ನ.2ರಂದು ಬೆಟಗೇರಿಯಲ್ಲಿ ಆನಂದಕಂದರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ
ಬೆಟಗೇರಿ:ಗ್ರಾಮದ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ನ.2 ರಂದು ಸಂಜೆ 6 ಗಂಟೆಗೆ ಜರುಗಲಿದೆ.
ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮಹಾಂತೇಶ ತಾವಂಶಿ ಗೌರವಾನ್ವಿತ ಅತಿಥಿಗಳಾಗಿ, ಖ್ಯಾತ ಜನಪದ ಗಾಯಕ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಗುರುರಾಜ ಹೊಸಕೋಟೆ ಮುಖ್ಯ ಅತಿಥಿಗಳಾಗಿ, ಗೋಕಾಕ ಕಸಾಪ ಅಧ್ಯಕ್ಷೆ ಭಾರತಿ ಮದಭಾಂವಿ, ಗ್ರಾಪಂ ಅಧ್ಯಕ್ಷೆ ಸಾಂವಕ್ಕಾ ಬಾನಸಿ, ಸ್ಥಳೀಯ ಹಾಉಸಸಂಘದ ಅಧ್ಯಕ್ಷ ಹನಮಂತ ಪಾಟೀಲ, ಪಿಕೆಪಿಎಸ್ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಗೋಕಾಕ ಹಿರಿಯ ಸಾಹಿತಿ ಪ್ರೋ.ಚಂದ್ರಶೇಖರ ಅಕ್ಕಿ ಉಪನ್ಯಾಸ ನೀಡಿದ ಬಳಿಕ ಖ್ಯಾತ ಜನಪದ ಗಾಯಕ ಗುರುರಾಜ ಹೊಸಕೋಟೆ ಹಾಗೂ ತಂಡದವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ಗ್ರಾಪಂ ಹಾಗೂ ವಿವಿಧ ಸಂಘ, ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಸದಸ್ಯರು, ಕನ್ನಡಾಭಿಮಾನಿಗಳು ಉಪಸ್ಥತರಿರಲಿದ್ದಾರೆ ಎಂದು ಸ್ಥಳೀಯ ಕರವೇ ಉಪಾಧ್ಯಕ್ಷ ಮಂಜು ಪತ್ತಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.