Breaking News
Home / Recent Posts / ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ
????????????????????????????????????

ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ

Spread the love

ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನ.29ರಂದು ನಡೆಯಲಿದೆ.
ನ.29ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಬಳಿಕ ಮಹಾಪ್ರಸಾದ, ದೀಪೋತ್ಸವ, ಕಾರ್ತಿಕೋತ್ಸವ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ಗ್ರಾಮ ಪಂಚಾಯತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸಂತ-ಶರಣರು ಮುಖ್ಯಅತಿಥಿಗಳಾಗಿ ಕಾರ್ತಿಕೋತ್ಸವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆಂದು ಇಲ್ಲಿಯ ಗ್ರಾಮದೇವತೆ ದ್ಯಾಮವ್ವದೇವಿ ಕಾರ್ತಿಕೋತ್ಸವ ಆಚರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ