Breaking News
Home / Recent Posts / ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ

Spread the love

ಮೂಡಲಗಿ: ತಾಲೂಲಕಿನ ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಜರುಗಿತು .
ಗುಜನಟ್ಟಿ ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಮಾತನಾಡಿ, ಗುಜನಟ್ಟಿ ಗ್ರಾಮಸ್ಥರು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು.
ಮೂಡಲಗಿ ಬಿಇಒ ಎ.ಸಿ.ಮಣ್ಣಿಕೇರಿ, ತಾಪಂ ಎಒ ಎಫ್.ಜಿ.ಚಿನ್ನಣವರ, ಸಿಡಿಪಿಓ ಯಲ್ಲಪ್ಪ ಗದಾಡಿ, ಸಿಪಿಐ ಶ್ರೀಶೈಲ್ ಬ್ಯಾಕೂಡ, ಹೆಸ್ಕಾಂ ಇಲಾಖೆಯ ಆರ್.ಡಿ ಪಿಡಾಯಿ, ಕೃಷಿ ಇಲಾಖೆಯವರು ಅರೋಗ್ಯ ಇಲಾಖೆಯವರು ತಮ್ಮ ತಮ್ಮ ಇಲಾಖೆಯ ಸರಕಾರಿ ಸೌಲಭ್ಯಗಳನ್ನು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಹಲವಾರು ವಿಷಯಗಳ ಕುರಿತು ಚರ್ಚಿಸಿ ಸ್ಥಳದಲ್ಲಿಯೇ ಇತ್ಯರ್ಥ ಪಡಿಸಿದರು.
ಆರೋಗ್ಯ ಇಲಾಖೆಯ ಜಾಗೃತಿ ಮೂಡಿಸುವ ರೂಪಕ ವಿಶೇಷವಾಗಿತ್ತು. 150 ಕ್ಕೂ ಹೆಚ್ಚು ಜನರಿಗೆ ಬಿಪಿ ಶುಗರ ತಪಾಸಣೆಯನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಲಕ್ಕವ್ವ ದೊಡ್ಡಶಿವಪ್ಪಗೋಳ, ಉಪಾಧ್ಯಕ್ಷೆ ಮಲ್ಲವ್ವ ಮಾದರ, ಸದಸ್ಯರು, ಮುಖಂಡರಾದ ಬಬ್ರುವಾಹನ ಬಂಡ್ರೋಳಿ, ಗುರುನಾಥ ಗಂಗನ್ನವರ, ಬಾಬು ಬಂಡ್ರೋಳಿ, ರಾಮಪ್ಪ ಅರಭಾವಿ, ಲಕ್ಷ್ಮಣ ಬಂಡ್ರೋಳಿ, ಜಗದೀಶ, ಸಿದ್ಧಲಿಂಗಪ್ಪ ಕಂಬಳಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಕಛೇರಿಯ ಶಿರಸ್ತೇದಾರ ಪರಸಪ್ಪಾ ನಾಯಿಕ ಅವರು ಪ್ರಾಸಾವಿಕವಾಗಿ ಮಾತನಾಡಿದರು, ಶಿಕ್ಷಕ ಮಹೇಶ ನಿರೂಪಿಸಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ