ಬೆಟಗೇರಿ;ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ನೂತನ 2 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಫೆ. 24ರಂದು ನಡೆಯಿತು.
ಸ್ಥಳೀಯ ಕೆಬಿಎಸ್ ಶಾಲೆಯ ಪ್ರಧಾನಗುರುಗಳಾದ ವೈ.ಸಿ.ಶೀಗಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸ್ಥಳೀಯ ಕೆಬಿಎಸ್ ಶಾಲೆಗೆ ನೂತನ 1 ಕೊಠಡಿ, ವಿವೇಕ ಶಾಲಾ ಕೊಠಡಿ ಯೋಜನೆಯ ಸುಮಾರು 13 ಲಕ್ಷ 90 ಸಾವಿರ ಅನುದಾನದಡಿ ಇಲ್ಲಿಯ ಕೆಜಿಎಸ್ ಶಾಲೆಗೆ ನೂತನ 1 ಕೊಠಡಿ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದರು.
ಇಲ್ಲಿಯ ಕೆಜಿಎಸ್ ಶಾಲೆಯ ಪ್ರಧಾನ ಗುರುಗಳಾದ ಎಸ್.ಬಿ.ಸನದಿ ಮಾತನಾಡಿ, ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗಳ ಅಭಿವೃದ್ಧಿಗೆ ಬೇಕಾದ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಹೆಣ್ಣು ಮಕ್ಕಳ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸಿದ್ಧಾರೂಢ ವಡೇರ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಲಕ್ಷ್ಮಣ ನೀಲಣ್ಣವರ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಬೆಟಗೇರಿ ಸಿಆರ್‍ಪಿ ಎಂ.ಬಿ.ನಾಯ್ಕರ, ಸಿದ್ದಪ್ಪ ಬಾಣಸಿ, ಬಸವರಾಜ ಕೋಣಿ, ಶೇಖರ ಚಂದರಗಿ, ಯಲ್ಲಪ್ಪ ಚಂದರಗಿ, ಮಲ್ಲಿಕಾರ್ಜುನ ನೀಲಣ್ಣವರ, ಮೀರಾಸಾಬ ನದಾಫ, ನೀಲಪ್ಪ ಪಾರ್ವತೇರ, ಭೀಮಶೆಪ್ಪ ಮುರಗೋಡ, ಸದಾಶಿವ ದಂಡಿನ, ಹಣಮಂತ ಕೋಣಿ, ಪುಂಡಲೀಕ ಚಿನ್ನನ್ನವರ, ರೇಣುಕಾ ಮೆಟ್ಟಿನ್ನವರ, ಶ್ರೀದೇವಿ ದಳವಾಯಿ, ಉಭಯ ಪ್ರಾಥಮಿಕ ಶಾಲೆಯ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು, ಶಿಕ್ಷಣಪ್ರೇಮಿಗಳು, ಗಣ್ಯರು, ಗ್ರಾಮಸ್ಥರು ಇದ್ದರು.