ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಆಧಾರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫಲಾಪೇಕ್ಷಿಗಳ ಬ್ಯಾಂಕ್ ಖಾತೆ ಪುಸ್ತಕ, ಚುನಾವಣಾ ಗುರುತಿನ ಚೀಟಿ, ನಿವೇಶನದ ಖಾತಾ ಸಂಖ್ಯೆಯ ಪ್ರತಿ.
ದಿ. 29ರ ಒಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಅಥವಾ ಸಂಬಂಧಿಸಿದ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕೆಂದು ಲಕ್ಷ್ಮಣ ಬಬಲಿ ಅವರು ತಿಳಿಸಿದ್ದಾರೆ.
Check Also
ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ
Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …