Breaking News
Home / Recent Posts / ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ

Spread the love

ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕ : ಅಭಿನವ ಶಿವಾನಂದ ಸ್ವಾಮೀಜಿ

*ಅದ್ಧೂರಿಯಾಗಿ ನಡೆದ ಬಸವ ಜಯಂತಿ*

ಜೋಡೇತ್ತುಗಳ ಭವ್ಯ ಮೆರವಣಿಗೆ  *ಕಿರು ಕಾಣಿಕೆ *ಸನ್ಮಾನ

ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ವಚನಗಳ ಮೂಲಕ ಜೀವನಾದರ್ಶಗಳನ್ನು ಬೋಧಿಸಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.
ಬೆಟಗೇರಿ ಗ್ರಾಮದಲ್ಲಿ ಇಲ್ಲಿಯ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. ಇಂದು ಪ್ರತಿಯೊಬ್ಬರು ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಮ್ಮುಖ ವಹಿಸಿ, ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ ನೆರವೇರಿಸಿದರು. ಸ್ಥಳೀಯ ಬಸವ ಅಭಿಮಾನಿ ಬಳಗದ ಸಂಚಾಲಕ ಮಲ್ಲಪ್ಪ ಪಣದಿ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮದ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣನ ವೃತ್ತದವರೆಗೆ ಸಕಲ ವಾದ್ಯಮೇಳಗಳೊಂದಿಗೆ ಬಸವೇಶ್ವರರ ಭಾವ ಚಿತ್ರದ ಹಾಗೂ ಶೃಂಗರಿಸಿದ ಜೋಡು ಎತ್ತುಗಳ ಭವ್ಯ ಮೆರವಣಿಗೆ ಅದ್ದೂರಿಯಾಗಿ ನಡೆದ ಬಳಿಕ ಮೆರವಣಿಗೆಯಲ್ಲಿ ಪಾಲ್ಗೊಂಡ ಜೋಡೇತ್ತುಗಳ ರೈತರಿಗೆ ಕಿರು ಕಾಣಿಕೆ, ಸನ್ಮಾನ ಕಾರ್ಯಕ್ರಮದ ನಂತರ ಮಹಾಪ್ರಸಾದ ಜರುಗಿತು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ