Breaking News
Home / Recent Posts / ರಾಷ್ರೀಯ ಸ್ವಯಂ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ

ರಾಷ್ರೀಯ ಸ್ವಯಂ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ

Spread the love

ರಾಷ್ರೀಯ ಸ್ವಯಂ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ

ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕವತಿಯಿಂದ ರಾಷ್ರೀಯ ಸ್ವಯಂ ಸೇವಾ ಯೋಜನೆಯ 54 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲ್ಲಾಯಿತು.
ಮಹಾವಿದ್ಯಾಲಯದ ಪ್ರಭಾರಿ ಡೀನ್ ಡಾ. ಬಿ.ಸಿ. ಪಾಟೀಲ್ ಮಾತನಾಡಿ, ಎನ್.ಎಸ್.ಎಸ್. ಸ್ವಯಂ ಸೇವಕ/ಸೇವಕಿಯರು ಸೇವಾ ಮನೋಭಾವದಿಂದ ಸಮಾಜ ಸೇವೆಯನ್ನು ಮಾಡಲು ಮುಂದಾಗಬೇಕು ಎಂದ ಅವರು ಎನ್.ಎಸ್.ಎಸ್. ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಕೈಗೊಂಡ ಎನ್.ಎಸ್.ಎಸ್. ಘಟಕದ ವಿವಿಧ ಸೇವಾಕಾರ್ಯಗಳನ್ನು ಪ್ರಸ್ತುತ ಪಡಿಸಿದರು.
ವಿವಿಧ ಘಟಕಗಳ ಸಂಯೋಜನಾ ಅಧಿಕಾರಿಗಳಾದ ಡಾ. ಎ.ಎಮ್. ನದಾಫ, ಡಾ|| ವಿಜಯಮಹಾಂತೇಶ ಮತ್ತು ಡಾ. ಮಂಜುಳಾ ಕರಡಿಗುದ್ದಿ ಮತ್ತಿತರರು ಇದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ