ರಕ್ತದಾನ ಶಿಬಿರ
ಮೂಡಲಗಿ: ಬೆಳಗಾವಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅ.26ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿರುವರು.
18ರಿಂದ 60 ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದಾಗಿದೆ. ರಕ್ತದಾನದಿಂದ ಹೃದಯರೋಗ ತೊಂದರೆ ಇಲ್ಲವಾಗುತ್ತದೆ. ವ್ಯಕ್ತಿಯಲ್ಲಿ ಮರುಚೈತನ್ಯ ತುಂಬುತ್ತದೆ. ರಕ್ತದಾನವನ್ನು ಮಾಡಿ ಆರೋಗ್ಯವನ್ನು ವೃದ್ಧಿಸಿಕೊಳ್ಳಿರಿ ಮತ್ತು ಒಂದು ಜೀವ ಉಳಿಸಿದ ಸಾರ್ಥಕತೆಯನ್ನು ಪಡೆದುಕೊಳ್ಳಿರಿ ಎಂದು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ತಿಳಿಸಿದ್ದಾರೆ.
IN MUDALGI Latest Kannada News