Breaking News
Home / Recent Posts / ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’

Spread the love

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’

ಮೂಡಲಗಿ: ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿಜಿಯ ಬಳಿಯ ಸತೀಶ ಶುಗರ್ಸ್ ಸಕ್ಕರೆ ಕಾರ್ಖಾನೆಯು 2024ನೇ ಸಾಲಿನ ಅತ್ಯುತ್ತಮ ಸಕ್ಕರೆ ಕಾರ್ಖಾನೆ
ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕಾರ್ಖಾನೆಯ ಸಕ್ಕರೆ ಘಟಕ, ಸಹ-ವಿದ್ಯುತ್ ಮತ್ತು ಡಿಸ್ಟಿಲರಿ ಘಟಕಗಳ ಉತ್ತಮ ಕಾರ್ಯನಿರ್ವಹಣೆ, ಪೂರ್ಣ ಪ್ರಮಾಣದ ಸಾಮರ್ಥ್ಯದ ಬಳಕೆ, ದಕ್ಷತೆ ಮತ್ತು
ಕಾರ್ಯಕ್ಷಮತೆಯನ್ನು ಪರಿಗಣಿಸಿ ಪುಣೆಯ ದಿ. ಡೆಕ್ಕನ್ ಶುಗರ್ ಟೆಲ್ನೋಲೊಜಿಸ್ಟ್ ಅಸೋಸಿಯೇಶನ್ ಸಂಸ್ಥೆಯ 69 ನೇ ವಾರ್ಷಿಕ ಸಮಾವೇಶದಲ್ಲಿ ಪ್ರಶಸ್ತಿ
ನೀಡಿ ಗೌರವಿಸಿದ್ದಾರೆ.
ಅಸೋಸಿಯೇಶನ್ ಅಧ್ಯಕ್ಷ ಎಸ್.ಬಿ. ಭಡ ಹಾಗೂ ಆಮಂತ್ರಿತ ಇನ್ನಿತರ ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಮಹಾರಾಷ್ಟ್ರ ರಾಜ್ಯ
ಸರ್ಕಾರದ ಕಂದಾಯ, ಪಶು
ಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವರಾದ ಡಾ. ರಾಧಾಕೃಷ್ಣ ವಿಖೆ ಪಾಟೀಲ ಇವರಿಂದ ಸತೀಶ ಶುಗರ್ಸ್‌ ಲಿಮಿಟೆಡ್ ಸಕ್ಕರೆ
ಕಾರ್ಖಾನೆಯ ಹಿರಿಯ ಅಧಿಕಾರಿಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಂಸ್ಥಾಪಕ ಅಧ್ಯಕ್ಷ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಕಾರ್ಖಾನೆಯು ಏಳೆಯನ್ನು ಸಾಧಿಸುತ್ತಿದ್ದು, ಕಾರ್ಖಾನೆಯ ಚೇರಮನ್ ಮತ್ತು
ಸಿಎಫ್‌ಓ ಪ್ರದೀಪಕುಮಾರ ಇಂಡಿ ಅವರ ನೇತೃತ್ವದ ಆಡಳಿತ ಮಂಡಳಿಯ ನಿರ್ಣಯ, ರೈತ ಭಾಂದವರ ಸಹಕಾರ, ಅಧಿಕಾರಿಗಳ ಮತ್ತು ಕಾರ್ಮಿಕರ ಹಾಗೂ
ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಕಾರ್ಖಾನೆಯ ಪ್ರಶಸ್ತಿ ಪಡೆಯಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ