ಪ್ರಕಾಶ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಬೆಟಗೇರಿ:ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ, ಚಿಕ್ಕೋಡಿ ಉಪನಿರ್ದೇಶಕರ ಕಾರ್ಯಾಲಯ, ಬೆಳಗಾವಿ ಜಿಲ್ಲಾ ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ, ಬೆಂಗಳೂರ ಕರ್ನಾಟಕ ರಾಜಕ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕ ಚಿಕ್ಕೋಡಿ ಇವರು ಸನ್ 2024-25ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸೆ.6ರಂದು ಜರುಗಿದ ಸಮಾರಂಭದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಪ್ರಕಾಶ ಮಹಾದೇವಪ್ಪ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಶಿಕ್ಷಣಪ್ರೇಮಿಗಳು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಾಲೆಯ ಸಹಶಿಕ್ಷಕ ಪ್ರಕಾಶ ಕುರಬೇಟ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.