Breaking News
Home / Recent Posts / ದಿ.15 ಮತ್ತು 16 ರಂದು ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

ದಿ.15 ಮತ್ತು 16 ರಂದು ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

Spread the love

ಅರಳಿಮಟ್ಟಿಯಲ್ಲಿ ಭಜನಾ ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ಚಕ್ರವರ್ತಿ ಶ್ರೀ ಸದಾಶಿವ ಮುತ್ಯಾನ ಮಠದಲ್ಲಿ ಭಜನಾ ಕಾರ್ಯಕ್ರಮ ದಿ.15 ಮತ್ತು 16 ರಂದು ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರವಿವಾರ ದಿ.15 ರಂದು ರಾತ್ರಿ 8 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭವಾಗುವುದು, ಸೋಮವಾರ ದಿ.16 ರಂದು ಬೆಳಿಗೆ ಶ್ರೀ ಸದಾಶಿವ ಮುತ್ಯಾನ ಕರ್ತೃ ಗದ್ದುಗೆಗೆ ಮತ್ತು ಚಂದ್ರಗಿರಿದೇವಿಗೆ ಅಭಿಷೇಕ ಜರುಗುವುದು. ನಂತರ ಗ್ರಾಮದ ಎಲ್ಲ ದೇವರಿಗೆ ಉಡಿ ತುಂಬುವುದು ಮಧ್ಯಾಹ್ನ 12 ಅನ್ನ ಸಂತಪರ್ಣೆ ಜರುಗುವುದು.
ಈ ಕಾರ್ಯಕ್ರಮದಲ್ಲಿ ಕೋಲೂರು ಬಬಲಾದಿ ಮಠದ ಶ್ರೀ ವೇದಮೂರ್ತಿ ಚಿಕ್ಕಯ್ಯ ಮಹಾಸ್ವಾಮಿಗಳು ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತ್ತಿತರರು ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ