Breaking News
Home / ಬೆಳಗಾವಿ / 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಬೈಕ್ ರ್ಯಾಲಿಗೆ ಚಾಲನೆ

16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಬೈಕ್ ರ್ಯಾಲಿಗೆ ಚಾಲನೆ

Spread the love

16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಬೈಕ್ ರ್ಯಾಲಿಗೆ ಚಾಲನೆ

ಮೂಡಲಗಿ : ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮಂಗಳವಾರ ಸಂಜೆ ಮೂಡಲಗಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೈಕ್ ರ್ಯಾಲಿಗೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್.ಬಾಗೋಜಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಾ ಗಿರೇನ್ನವರ ಚಾಲನೆ ನೀಡಿದರು.
ರ್ಯಾಲಿಯು ಮೂಡಲಗಿ ಶಿಕ್ಷಣ ಸಂಸ್ಥೆಯ ಮೈದಾನದಿಂದ ಕಲ್ಮೇಶ್ವರ ವೃತ್, ಚೆನ್ನಮ್ಮ ವೃತ್, ಬಸವ ಮಂಟಪ, ಸಂಗಪ್ಪಣ್ಣ ಅಂಗಡಿ ವೃತ್, ಗೋಕಾಕ ರಸ್ತೆಯ ಮೂಲಕ ಸಮ್ಮೇಳನ ನಡೆಯುವ ಸ್ಥಳ ಆರ್.ಡಿ.ಎಸ್ ಕಾಲೇಜು ಮೈದಾನ ತಲುಪಿತು.
ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ, ಸದಸ್ಯರು, ಲಯನ್ಸ್ ಪರಿವಾರ, ಮಾಜಿ ಸೈನಿಕ ಸಂಘ ಹಾಗೂ ವಿವಿಧ ಕನ್ನಡ ಪರ ಸಂಘಟನೆಯ ಸದಸ್ಯರು ಮತ್ತಿತರರು ಇದ್ದರು.
ಫೋಟೋ ಕ್ಯಾಪ್ಸನ್> ಮೂಡಲಗಿ: ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮಂಗಳವಾರ ಸಂಜೆ ಮೂಡಲಗಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೈಕ್ ರ್ಯಾಲಿಗೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್.ಬಾಗೋಜಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಿರೆಣ್ಣವರ, ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಚಾಲನೆ ನೀಡಿದರು.
 


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ