Breaking News
Home / ಬೆಳಗಾವಿ / ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

Spread the love

ಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ  ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಪ್ತ ಸಹಕಾರಿ ತತ್ವಗಳ ತಳಹದಿಯ ಮೇಲೆ ಕಾರ್ಯನಿರ್ವಹಿಸುತ್ತಾ ರಾಷ್ಟ್ರದ ಬೆನ್ನೆಲುಬಾಗಿರುವ ರೈತನಿಗೆ ಬೆನ್ನೆಲುಬಾಗಿ ಪಾರದರ್ಶಕ ಆಡಳಿತ, ಪರಿಶುದ್ಧ ಹಾಲು ಸಂಗ್ರಹಣೆ, ರೈತರಿಗೆ ರಿಯಾಯ್ತಿ ದರದಲ್ಲಿ ಹೈನುಗಾರಿಕೆಗೆ ಬೇಕಾಗುವ ಉಪಕರಣಗಳು ಹಾಗೂ ಸರಕಾರದ ಸಹಕಾರಿ ಕ್ಷೇತ್ರದ ಯೋಜನೆಗಳನ್ನು ಹಾಲು ಉತ್ಪಾದಕರಿಗೆ ತಲುಪಿಸುವಲ್ಲಿ ಸಂಘದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ  ಮತ್ತು  ಸ್ಥಳೀಯ ಶಾಸಕರಾದ ಸನ್ಮಾನ್ಯ ಬಾಲಚಂದ್ರ ಜಾರಕಿಹೊಳಿಯವರ ಉತ್ತಮ ಮಾರ್ಗದರ್ಶನವೇ ಸಂಘದ ಪ್ರಶಸ್ತಿ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ