Breaking News
Home / ಬೆಳಗಾವಿ / ಡಿ.21 ರಂದು ಬೆಟಗೇರಿ ಮಾರುತಿ ದೇವರ ಕಾರ್ತಿಕೋತ್ಸವ

ಡಿ.21 ರಂದು ಬೆಟಗೇರಿ ಮಾರುತಿ ದೇವರ ಕಾರ್ತಿಕೋತ್ಸವ

Spread the love

ಡಿ.21 ರಂದು ಬೆಟಗೇರಿ ಮಾರುತಿ ದೇವರ ಕಾರ್ತಿಕೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ.21 ರಂದು ನಡೆಯಲಿವೆ.
ಡಿ.21 ರಂದು ಬೆಳಿಗ್ಗೆ 7ಗಂಟೆಗೆ ಇಲ್ಲಿಯ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ ಮಹಾಪೂಜೆ, ಎಲೆ ಪೂಜೆ ಕಾರ್ಯಕ್ರಮ, ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಣೆ, ಸಾಯಂಕಾಲ 6ಗಂಟೆಗೆ ಸ್ಥಳೀಯ ಕರಡಿ ಮಜಲು ಮೇಳ ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ ಹಾರಿಸುವದು, ಸಿಹಿ ಹಂಚುವದು, ಕಾರ್ತಿಕ ದೀಪೋತ್ಸವ, ಮದ್ದು ಹಾರಿಸುವದು, ರಾತ್ರಿ 9 ಗಂಟೆಗೆ ಬಿಲಕುಂದಿ ವಿ.ಬಿ.ಮೆಲೋಡಿಸ್ ಅವರಿಂದ ಹಾಸ್ಯ ರಸಮಂಜರಿ ಕಾರ್ಯಕ್ರಮ ನಡೆದ ಬಳಿಕ ಪ್ರಸಕ್ತ ವರ್ಷದ ಕಾರ್ತಿಕೋತ್ಸವ ಕಾರ್ಯಕ್ರಮ ಸಮಾರೊಪಗೊಳ್ಳಲಿದೆ.
ಸ್ಥಳೀಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳ ಸಾನಿಧ್ಯ ವಹಿಸಲಿದ್ದಾರೆ. ಗಣ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಮಾರುತಿ ದೇವರ ಭಕ್ತರು ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮಾರುತಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ