Breaking News
Home / ಬೆಳಗಾವಿ / ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ

Spread the love

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ
ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.26ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ.
ಗ್ರಾಮದ ವಿಪ್ರಾಗ್ರಾಕೃಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಗೊಂಡ ಚುನಾಯಿತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.
ಸಂಘದ ಕಳೆದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಸಂಘದ ಪರವಾಗಿ ಶಾಲು ಹೊದಿಸಿ ಸತ್ಕರಿಸಲಾಯಿತು. ನೂತನವಾಗಿ ಆಯ್ಕೆಗೊಂಡ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರ ಸ್ವಾಗತ ಕಾರ್ಯಕ್ರಮ ನಡೆಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಈರಯ್ಯ ಹಿರೇಮಠ ಸೇರಿದಂತೆ ಹಲವಾರು ಜನ ಗಣ್ಯರು ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ಸೇರಿದಂತೆ ಸ್ಥಳೀಯ ರಾಜಕೀಯ ಮುಖಂಡರು, ಹಿರಿಯ ನಾಗರಿಕರು, ಯುವಕರು, ಗ್ರಾಮಸ್ಥರು, ನೂತನವಾಗಿ ಆಯ್ಕೆಗೊಂಡ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರು, ಸಂಘದ ಸಿಬ್ಬಂದಿ, ಗ್ರಾಮಸ್ಥರು, ಇತರರು ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ