ಮೂಡಲಗಿ: ಕೇಂದ್ರ ಹಣಕಾಸು ಸಚಿವರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕಳೆದ 4 ವರ್ಷಗಳಿಂದ ರಾಜ್ಯಸಭೆಯಲ್ಲಿ ಅವರನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರ ಶಾಂತ ಸ್ವಭಾವ , ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯವಾಗಿದೆ ಎಂದು ಸ್ಮರಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
IN MUDALGI Latest Kannada News