ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ.
ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ