*ಮಹಿಳಾ ದಿನಾಚರಣೆ ಮತ್ತು ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ*
*ಮಕ್ಕಳನ್ನು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಪಾತ್ರ ಮುಖ್ಯ – ನ್ಯಾಯಾಧೀಶೆ ಜ್ಯೋತಿ ಪಾಟೀಲ*
ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯು ಎಲ್ಲ ರಂಗದಲ್ಲಿ ತಮ್ಮ ತಾವು ಗುರುತಿಸಿಕೊಂಡಿದ್ದು, ಪ್ರತಿಯೋಬ್ಬರು ಕನಿಷ್ಠ ಕಾನೂನಿನ ಜ್ಞಾನವನ್ನು ತಿಳಿದುಕೊಂಡು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ತಮ್ಮೆಲ್ಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.
ಅವರು ಗುರುವಾರದಂದು ಪಟ್ಟಣದ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಮೂಡಲಗಿ ತಾಲೂಕಾ ಆಡಳಿತ, ತಾ.ಪಂ ಕಛೇರಿ, ತಾಲೂಕಾ ಕಾನೂನುಸೇವೆಗಳ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರಭಾವಿ ಶಿಶು ಅಭಿವೃದ್ಧಿ ಯೋಜನೆ ಕಛೇರಿ ಮೂಡಲಗಿ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಆಶ್ರಯದಲ್ಲಿ ಹಮ್ಮಿಕೊಂಡಿದ ಅಂತರಾಷ್ಟಿಯ ಮಹಿಳಾ ದಿನಾಚರಣೆ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಇಂದು ಹೆಣ್ಣು ಮಕ್ಕಳ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷದಣದ ಜೊತೆಗೆ ನೈತಿಕ ಹಾಗೂ ವ್ಯವಹಾರಿಕ ಜ್ಞಾನದ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.
ಸಿಡಿಪಿಒ ಯಲ್ಲಪ್ಪ ಗದಾಡಿ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿ ಸರ್ಕಾರದ ಎಲ್ಲ ಯೋಜನೆಗಳನ್ನು ಸಮರ್ಪಕ ಅನುಷ್ಠಾನ ಮಾಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಮೇಲ್ವಿಚಾರ ಪಾತ್ರ ಮಹತ್ವದ್ದಾಗಿದ್ದು ತಮ್ಮ ಕುಟುಂಬದ ಜೊತೆಗೆ ತಮ್ಮ ಕೆಲಸದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವುದರಿಂದ ಎಲ್ಲಾ ಮಹಿಳಾ ಸಿಬ್ಬಂದಿಯನ್ನು ಗೌರವಿಸಿದ್ದು, ಮಹಿಳೆಯರು ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಧೈರ್ಯ ಮತ್ತು ಸಾಹಸದಿಂದ ಕೆಲಸ ನಿರ್ವಹಿಸುತ್ತಿರುದರಿಂದ ಮಹಿಳಾ ಸಬಲೀಕರಣದ ಸಂಕೇತವಾಗಿದೆ ಎಂದರು.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಮಹಿಳೆ ಯಾವುದೇ ಕೆಲಸವನ್ನು ಅತ್ಯಂತ್ತ ಜವಾಬ್ದಾರಿಯುತ್ತವಾಗಿ ಹಾಗೂ ಸಮರ್ಪಣಾ ಮನೋಭಾವನೆದೊಂದಿಗೆ ಕಾರ್ಯ ನಿಭಾಯಿಸುತ್ತಿರುವಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಹಿಳೆಯರನ್ನು ಹಾಗೂ ವಿಶೇಷ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯಾಧ್ಯಂತ ಮಾಡುತ್ತಿದೆ ಎಂದ ಹೇಳಿದರು.
ವಕೀಲರಾದ ಲಕ್ಷ್ಮಣ ಅಡಿಹುಡಿ, ಜ್ಯೋತಿ ಕುಡತೆ ಅವರು ಅತಿಥಿ ಉಪನ್ಯಾಸ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ತಹಶೀಲ್ದಾರ ಶಿವಾನಂದ ಬಬಲಿ ವಹಿಸಿದ್ದರು.
ಸಮಾರಂಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷೆ ಖುರ್ಷಾದ ನದಾಫ್, ಉಪಾಧ್ಯಕ್ಷೆ ಭೀಮವ್ವ ಪೂಜೇರಿ, ಅರಭಾವಿ ಶಿಶು ಅಭಿವೃದ್ಧಿ ಯೋಜನೆ ಕಛೇರಿ ವ್ಯಾಪ್ತಿಯಲ್ಲಿನ ಅತ್ಯತ್ತಮ ಕಾರ್ಯನಿರ್ವಸಿದ ೧೬ ಜನ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಿದರು ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಜಿಲ್ಲೆಯ ಹತ್ತು ಸಾಧಕರಿಗೆ ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಇದೇ ಸಮಯದಲ್ಲಿ ಸಿಡಿಪಿಒ ಕಚೇರಿಯ ಸುಮಾರು ೩೦ ಮಹಿಳಾ ಸಿಬ್ಬಂದಿವರ್ಗದವರನ್ನು ಸನ್ಮಾನಿಸಲಾಯಿತು.
ಸಮಾರಂಭದ ವೇದಿಕೆಯಲ್ಲಿ ತಾ.ಪಂ ಇ.ಒ ಎಫ್.ಜಿ.ಚಿನನ್ನವರ, ಬಿಇಒ ಅಜೀತ ಮನ್ನಕೇರಿ, ಸಮುದಾಯ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಭಾರತಿ ಕೋಣಿ, ಎಸಿಡಿಪಿಒ ಜಯಶ್ರೀ ಮುರಗುಂಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಮೂಡಲಗಿ ತಾಲೂಕಾ ಅಧ್ಯಕ್ಷ ಜಗದೀಶ ಡೊಳ್ಳಿ, ಅಥಣಿ ತಾಲೂಕಾ ಅಧ್ಯಕ್ಷ ವಿಠ್ಠಲ ಪೂಜೇರಿ, ಸವದತ್ತಿ ತಾಲೂಕಾ ಅಧ್ಯಕ್ಷ ಮಹಾದೇವ ಮುರಗೋಡ, ಕವಿರತ್ನ ಕಾಳಿದಾಸ ಪ್ರಸಸ್ತಿ ಪುರಸ್ಕೃತ ಯಲ್ಲಾಲಿಂಗ ವಾಳದ, ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಸುಭಾಸ ಗೋಡ್ಯಾಗೋಳ, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತೆ ಮಾಯವ್ವಾ ದುರದುಂಡಿ, ಶೋಭಾ ತಳವಾರ, ವಿದ್ಯಾ ರಡ್ಡಿ, ಡಾ.ಚುಟುಕುಸಾಬ ಮಂಟೂರ ಇದ್ದರು. ಸಮಾರಂಭದಲ್ಲಿ ಅರಭಾವಿ ಸಿಡಿಪಿಒ ಕಛೇರಿ ವ್ಯಾಪ್ತಿ ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ವಕೀಲರು ಹಾಗೂ ಯುವ ಸಂಘಗಳ ಒಕ್ಕೂಟದ ಪಧಾದಿಕಾರಿಗಳು ಉಪಸ್ಥಿತರಿದ್ದರು
ಸಿಡಿಪಿಒ ಕಚೇರಿಯ ಇಂದ್ರಾ ಭೋವಿ ಸ್ವಾಗತಿಸಿದರು, ಯಮುನಾ ತಳವಾರ ನಿರೂಪಿಸಿದರು, ಕಸ್ತೂರಿ ಪಡೆನ್ನವರ ವಂದಿಸಿದರು.