Breaking News
Home / ಬೆಳಗಾವಿ / ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕ- ಶಾಸಕ ಬಾಲಚಂದ್ರ ಜಾರಕಿಹೊಳಿ

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ
ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತೆ ತಮ್ಮ ಶಾಸಕರ ನಿಧಿಯಿಂದ ಪುಸ್ತಕಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವಂತೆ ತಿಳಿಸಿದರು .
ಸರಕಾರದ ವಿವಿಧ ಸೇವೆಗಳಿಗೆ ಈ ಭಾಗದ ವಿದ್ಯಾರ್ಥಿಗಳು ಸಿದ್ದರಾಗಬೇಕು.
ಸದರಿ ಪುಸ್ತಕಗಳು ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ವಿದ್ಯಾರ್ಥಿಗಳು ಎದುರಿಸಲು ಅನುಕೂಲವಾಗಲಿವೆ. ಸರಕಾರದ ವಿವಿಧ ಹುದ್ದೆಗಳ ಮೂಲಕ ನಡೆಯುವ ಪರೀಕ್ಷೆಗಳಿಗೆ ಸಿದ್ಧತೆಗೊಳ್ಳಲು ಬೇಕಾದ ಅಗತ್ಯ ಪುಸ್ತಕಗಳಾಗಿವೆ. ಈ ಪುಸ್ತಕಗಳನ್ನು ಕಾಲೇಜುಗಳ ಹಾಗೂ ಪ್ರೌಢಶಾಲೆಗಳ ಗ್ರಂಥಾಲಯದಲ್ಲಿಟ್ಟು ವಿದ್ಯಾರ್ಥಿಗಳ ಓದಿಗೆ ಒದಗಿಸಿಕೊಟ್ಟು ಉಜ್ವಲ ಭವಿಷ್ಯ ರೂಪಿಸಲು ಅನುಕೂಲವಾಗಲಿದೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡು ಲಕ್ಷ ರೂ ಮೊತ್ತದ ಪುಸ್ತಕಗಳನ್ನು ಮೂಡಲಗಿ ಶೈಕ್ಷಣಿಕ ವಲಯದ ಐದು ಸರಕಾರಿ ಪದವಿ ಪೂರ್ವ ಕಾಲೇಜುಗಳ ಹಾಗೂ 37 ಸರ್ಕಾರಿ ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಎಸ್. ಎ. ಬಬಲಿ, ಬಿಇಓ ಅಜಿತ ಮನ್ನಿಕೇರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಫಕ್ಕೀರಪ್ಪ ಚಿನ್ನನ್ನವರ, ಸಿಡಿಪಿಓ ಯಲ್ಲಪ್ಪ ಗಡಾಡಿ, ಪುರಸಭೆ ಸದಸ್ಯರು, ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ