Breaking News
Home / ಬೆಳಗಾವಿ / ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಡಾ.ಅಂಬೇಡ್ಕರ್ ಬದುಕೇ ನಮಗೆ ಆದರ್ಶ*

*ಡಾ.ಅಂಬೇಡ್ಕರ್ ಜನ್ಮದಿನಾಚರಣೆಯಲ್ಲಿ ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಅಂತಹ ಮಹಾತ್ಮರ ಸ್ಮರಣೆ ಮಾಡುವುದು ಇಂದು ನಮಗೆಲ್ಲರಿಗೂ ಸಂಭ್ರಮದ ವಿಚಾರವೆ. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಇಂದಿಗೂ ಸ್ಮರಣೀಯವಾಗಿವೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿಯಾಗಿವೆ. ಅವರ ದೇಶಕ್ಕೆ ನೀಡಿದ ಸಂವಿಧಾನದ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರು ಹಲವಾರು ಕ್ಷೇತ್ರಗಳಲ್ಲಿ ನೀಡಿರುವ ಹಲವಾರು ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ದೊರೆತಿದೆ ಎಂದು ಸ್ಮರಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜ್ಞಾನಮಟ್ಟವನ್ನು ಕೇವಲ ಭಾರತ ದೇಶದವರು ಮಾತ್ರವಲ್ಲ, ವಿಶ್ವ ಮಟ್ಟದಲ್ಲಿಯೂ ಪಸರಿಸಿದೆ. ಕಾರಣ ಕೇವಲ ಅವರು ಪಡೆದಿರುವ ಪದವಿಗಳಿಂದ ಅಲ್ಲ. ಅವರ ಜ್ಞಾನದಿಂದ. ವಿಚಾರಗಳಿಂದ. ಹೀಗಾಗಿ ಡಾ.ಅಂಬೇಡ್ಕರ್ ಅವರು ತಮ್ಮ ವಿಚಾರಗಳ ಮೂಲಕ ಈಗಲೂ ಎಲ್ಲರ ಮನಸಿನಲ್ಲಿ ಜೀವಂತವಾಗಿಯೇ ಇದ್ದಾರೆ ಎಂದು ಹೇಳಿದರು.
ಡಾ.ಅಂಬೇಡ್ಕರ್ ಅವರೊಬ್ಬ ಮೇರು ನಾಯಕ. ಸಂವಿಧಾನ ಶಿಲ್ಪಿಯೂ ಆಗಿದ್ದ ಅವರ ಜೀವನ ನಮಗೆಲ್ಲ ಆದರ್ಶವಾಗಿದೆ. ಮಾತ್ರವಲ್ಲ ಅವರು ಹಾಕಿಕೊಟ್ಟ ಆದರ್ಶ ಮಾರ್ಗಗಳು ಈಗಲೂ ಹಲವರಿಗೆ ದಾರಿದೀಪವಾಗಿವೆ. ಬಾಬಾ ಸಾಹೇಬರ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಮೂಲಕ ಅವರ ಜೀವನಾದರ್ಶನವನ್ನು ಪಾಲನೆ ಮಾಡೋಣ ಎಂದು ಕರೆ ನೀಡಿದರು.
ಇಂದಿನ ಪ್ರಸ್ತುತ ದಿನಮಾನಗಳಲ್ಲಿ ಡಾ.ಅಂಬೇಡ್ಕರ್ ಅವರ ಚಿಂತನೆಗಳು ನಮಗೆಲ್ಲರಿಗೂ ಹಲವಾರು ಸಮಸ್ಯೆಗಳಿಗೆ ಪರಿಹಾರ ಮಾರ್ಗವನ್ನು ತೋರುತ್ತಿವೆ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿಯೇ ಆಗಲಿ ಅವರ ಚಿಂತನೆಗಳು ಎಲ್ಲ ಜನಾಂಗಗಳ ಅಭಿವೃದ್ಧಿಗೆ ಮಾರ್ಗೋಪಾಯಗಳಾಗಿವೆ ಎಂದು ವಿವರಿಸಿದರು.
ಭಾರತೀಯ ಸಮಾಜದ ಅವಕಾಶವಂಚಿತ ಸಮುದಾಯದ ಹಿನ್ನೆಲೆಯಿಂದ ಹುಟ್ಟಿಬಂದ ಅಂಬೇಡ್ಕರ್ ಅವರು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮಾಡಿದ ಸಾಧನೆ ಊಹಿಸಲೂ ಅಸಾಧ್ಯ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರೀತಿಸುವ, ಸಮಾನತೆ ಮತ್ತು ಮಾನವೀಯತೆಯನ್ನು ಗೌರವಿಸುವ ಎಲ್ಲರಿಗೂ ಆದರ್ಶವಾದುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ ಮಂಡಲ್ ಪ್ರ. ಕಾರ್ಯದರ್ಶಿ ಮಹಾಂತೇಶ ಕುಡಚಿ, ಗೋಕಾಕ ಗ್ರಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೊಳ, ಆನಂದ ಅತ್ಯಾಗೋಳ, ಪ್ರಮುಖರಾದ ಲಕ್ಷ್ಮಣ್ ಕತ್ತಿ, ಬಸು ಭುಜನ್ನವರ, ಅಮೃತ ದಪ್ಪಿನ್ನವರ, ಅವ್ವಣ್ಣ ಗೌಡಿ, ಪ್ರಮೋದ ನುಗ್ಗಾನಟ್ಟಿ, ನಾಗರಾಜ ಕುದರಿ, ಅಡಿವೆಪ್ಪ ಗೌಳಿ ಕಂಕಾಳಿ, ಹಣಮಂತ ಕೆಂಡಾರಿ, ಬಿಜೆಪಿ ಪದಾಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ