Breaking News
Home / ಬೆಳಗಾವಿ / ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಚಾಲನೆ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಚಾಲನೆ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ: ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಿನ್ನೆ ಬುಧವಾರದಂದು ಚಾಲನೆ ನೀಡಿದರು.
ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ ಭಕ್ತ ಸಮೂಹದ ಮಧ್ಯ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವಾಗ್ರಹದೇವರ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಭವ್ಯ ಮೆರವಣಿಗೆಯಲ್ಲಿ ಮೆರಕನಟ್ಟಿ ಮಹಾಲಕ್ಷ್ಮೀ ದೇವಸ್ಥಾನದವರೆಗೆ ಕರೆ ತರಲಾಯಿತು.
ಕೊಳವಿ ಹನುಮಂತ ದೇವಸ್ಥಾನ, ಬಾಫನ ಚೌಕ, ಅಜಂತಾ ಕೂಟ, ಆನಂದ ಚಿತ್ರಮಂದಿರ, ಬಸವೇಶ್ವರ ವೃತ್ತದ ಮೂಲಕ ಮೆರಕನಟ್ಟಿ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದವರೆಗೆ ಭಾರಿ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತ ಸಮೂಹದ ನಡುವೆ ಮಹಾಲಕ್ಷ್ಮೀ ಮತ್ತು ಉಪ ದೇವತೆಗಳ ಭವ್ಯ ಮೆರವಣಿಗೆಯು ಜರುಗಿತು.
ವಾದ್ಯವೃಂದಗಳು, ಜಾಂಜ ಪತಾಕ, ಡೊಳ್ಳು ಕುಣಿತ, ಉಡುಪಿ ಶೈಲಿಯ ಕಲೆಯನ್ನು ಹೊತ್ತುಕೊಂಡು ಕಲಾವಿದರು ದೇವರ ವಿಗ್ರಹಗಳನ್ನು ಬರಮಾಡಿಕೊಂಡರು.
ನೂರಾರು ಸುಮಂಗಲೆಯರು ಕುಂಭ ಮೇಳ ಹೊತ್ತುಕೊಂಡು ತಮ್ಮ ಭಕ್ತಿ ಭಾವ ಮೆರೆದರು.
ಮೂರ್ತಿಗಳ ತಮ್ಮ ತಮ್ಮ ಅಂಗಳದಲ್ಲಿ ಪ್ರವೇಶಿಸುತ್ತಿದ್ದಂತೆಯೇ ಗೃಹಿಣಿಯರು ಮುಂಚಿತವಾಗಿಯೇ ತಮ್ಮ ಮನೆಯೇ ಮುಂದೆ ಆಕರ್ಷಕವಾಗಿ ರಂಗೋಲಿ ಬಿಡಿಸಿ ನೀರು ಹಾಕಿ ದೇವರುಗಳಿಗೆ ಪೂಜೆ ಸಲ್ಲಿಸಿದರು.
ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವ ಕಾರ್ಯಕ್ರಮದ ಮೊದಲ ದಿನದ ಭವ್ಯ ಮೆರವಣಿಗೆಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಏಪ್ರಿಲ್ ೩೦ ರಿಂದ ಮೇ ೮ ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಗ್ರಾಮ ದೇವತೆಯರ ಯಾತ್ರಾ ಮಹೋತ್ಸವಕ್ಕೂ ಮುನ್ನ ನಡೆಯುವ ಈ ೯ ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗೋಕಾಕ ಮಹಾ ಜನತೆಯು ತನು, ಮನ, ಧನದಿಂದ ಭಾಗವಹಿಸಬೇಕು. ಪ್ರತಿದಿನವೂ ಭಜನೆ, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತ ಸಮೂಹಕ್ಕೆ ದೇವಸ್ಥಾನದಲ್ಲಿ ಮಹಾ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಧಾರ್ಮಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಬಾಲಚಂದ್ರ ಜಾರಕಿಹೊಳಿ ಅವರ ಜೊತೆಗೆ ಯುವ ಮುಖಂಡರಾದ ಸಂತೋಷ ಜಾರಕಿಹೊಳಿ, ಅಮರನಾಥ ಜಾರಕಿಹೊಳಿ, ಸನತ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ಅಭಿಷೇಕ ನಾಯಿಕ, ಜಾತ್ರಾ ಮಹೋತ್ಸವ ಸಮಿತಿಯ ಸದಸ್ಯರು, ಗಣ್ಯ ವರ್ತಕರು, ಯುವಕ ಸಂಘಟನೆಗಳ ಕಾರ್ಯಕರ್ತರು, ಮಹಿಳಾ ಸಂಘಟನೆಗಳ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

*ಹೋಮ ಪೂಜೆಯಲ್ಲಿ ಪಾಲ್ಗೊಂಡು ಶಾಸಕ ಬಾಲಚಂದ್ರ ಜಾರಕಿಹೊಳಿ*

-ಮೇ ೧ ರ ಗುರುವಾರದಂದು ಜರುಗಿದ ಪೂಜೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಾಲ್ಗೊಂಡರು.
ಮೆರಕನಟ್ಟಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ಮಹಾಲಕ್ಷ್ಮೀ ಮತ್ತು ಅದರ ಉಪ – ದೇವತೆಗಳ ಮೂರ್ತಿ ಪ್ರತಿಷ್ಠಾಪನೆ ಪೂಜೆಯಲ್ಲಿ ಭಾಗವಹಿಸಿದರು.
ಉಚ್ಚಿಲ ಕೆ ವಿ ರಾಘವೇಂದ್ರ ಉಪಾಧ್ಯಾಯ ಜ್ಯೋತಿಷ್ಯರ ನೇತೃತ್ವದಲ್ಲಿ ಅಷ್ಠ ಬಂಧ ಪ್ರತಿಷ್ಠಾ ಪೂಜೆಯು ವಿವಿಧ ಪೂಜೆಗಳೊಂದಿಗೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೇರಕನಟ್ಟಿ ಮಹಾಲಕ್ಷ್ಮೀ ದೇವಸ್ಥಾನದ ದ್ವಾರ ಬಾಗಿಲು ಮತ್ತು ನವಿಕೃತಗೊಂಡ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದರು.
ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಅಮರನಾಥ ಮತ್ತು ಸರ್ವೋತ್ತಮ ಜಾರಕಿಹೊಳಿ, ಜಾತ್ರಾ ಕಮಿಟಿಯ ಪ್ರಮುಖರು, ನಗರ ಸಭೆ ಸದಸ್ಯರು ಸೇರಿದಂತೆ ಹಲವರು ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ