Breaking News
Home / ಬೆಳಗಾವಿ / ವಿಶ್ವಕ್ಕೆ ಯೋಗದ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ: ರವಿ ಭರಮನಾಯ್ಕ

ವಿಶ್ವಕ್ಕೆ ಯೋಗದ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ: ರವಿ ಭರಮನಾಯ್ಕ

Spread the love

ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು.

ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ  ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದರು.
ಸುಮಾರು ಗಂಟೆಗಳ ಕಾಲ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಭಂಗಿಯ ಯೋಗಾಸನಗಳನ್ನು ಮಾಡಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಶಿಕ್ಷಕಿ ಹೇಮಾವಿ ಕಲಾದಗಿ ಮತ್ತು ದಾನಯ್ಯ ಹಿರೇಮಠ ವಿವಿಧ ಬಗೆಯ ಯೋಗಾಸನಗಳನ್ನು ಹೇಳಿಕೊಟ್ಟರು.
ಕನ್ನಡ ಮಾಧ್ಯಮ ಮುಖ್ಯ ಶಿಕ್ಷಕಿ ಕಮಲಾಕ್ಷಿ ನಾಯ್ಕ, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಿದ್ಯಾಶ್ರೀ ಜನ್ಮಟಿ, ಶಿಕ್ಷಕರು, ಸಿಬ್ಬಂದಿವರ್ಗ, ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇದ್ದರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ