ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2024-25ನೇ ಸಾಲಿನ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಪ್ರಥಮ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ.
ಇತ್ತೀಚೆಗೆ ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಸದಸ್ಯರು, ಪದಾಧಿಕಾರಿಗಳು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮಹಾದೇವ ಕಂಬಿ ಮತ್ತು ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ಹಾಗೂ ಸದಸ್ಯರಿಗೆ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಪ್ರಥಮ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ವೇಳೆ ಸ್ಥಳೀಯ ಸಂಘದ ಅಧ್ಯಕ್ಷ ಮಹಾದೇವ ಕಂಬಿ, ಅರ್ಜುನ ಬ್ಯಾಗಿ, ಬಸವರಾಜ ಸಿದ್ನಾಳ, ಮಲ್ಲಪ್ಪ ಕಂಬಾರ, ಸಿದ್ಧೇಶ್ವರ ಕುರಬೇಟ, ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ, ವಿವಿಧ ತಾಲೂಕಾ ಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಹಕಾರಿ ಧುರೀಣರು, ಗಣ್ಯರು, ಮತ್ತೀತರರು ಇದ್ದರು.