Breaking News
Home / ಬೆಳಗಾವಿ / ಅ-04 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟಣೆ

ಅ-04 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟಣೆ

Spread the love

ಮೂಡಲಗಿ: ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟನಾ ಸಮಾರಂಭವು ಶನಿವಾರ ಅ-04 ರಂದು ಮಧ್ಯಾಹ್ನ 3.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಉದ್ಘಾಟನಾ ಸಮಾರಂಭವು ಜರುಗಲಿದೆ ಎಂದು ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಗುರುವಾರ ಅ-02 ರಂದು ಸಹಕಾರಿಯ ಸಭಾ ಭವನದಲ್ಲಿ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಂಸ್ಥೆಯು ಕಳೆದ 23 ವರ್ಷಗಳಿಂದ ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಾರ್ಚ 31 ರವರೆಗೆ ಸಂಘವು 15628 ಶೇರುದಾರರನ್ನು ಹೊಂದಿದ್ದು, ರೂ. 405.24 ಕೋಟಿ ವ್ಯವಹಾರ ಮಾಡಿ ಪ್ರಗತಿ ಫಥದಲ್ಲಿ ಸಾಗುತ್ತಿದೆ ಎಂದರು.
ಕಾಡಸಿದ್ದೇಶ್ವರ ಮಠ ಕನ್ನೇರಿ ಪೂಜ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಜಿಗಳು, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಜಿಗಳು ಹಾಗೂ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಜಿಗಳು ದಿವ್ಯ ಸಾನಿಧ್ಯ ವಹಿಸುವರು. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವಿವರ ನೀಡಿದರು.
ಮಾಜಿ ಮುಖ್ಯಮಂತ್ರಿಗಳು, ಬೆಳಗಾವಿ ಲೋಕಸಭಾ ಸಂಸದ ಜಗದೀಶ ಶೆಟ್ಟರ್, ಮಾಜಿ ಸಚಿವರಾದ ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಮಾಜಿ ಸಂಸದರಾದ ಪ್ರಭಾಕರ ಕೋರೆ, ರಮೇಶ ಕತ್ತಿ, ಅಮರಸಿಂಹ ಪಾಟೀಲ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ದುರ್ಯೋಧನ ಐಹೊಳೆ, ವಿಠ್ಠಲ ಹಲಗೇಕರ, ನಿಖಿಲ್ ಕತ್ತಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನೀಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ. ರಾಜೀವ, ಡಾ ವಿಶ್ವನಾಥ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಪಾಟೀಲ ಅವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಸಹಕಾರಿಯ ಹಿರಿಯ ಧುರೀಣರು, ಹಲವು ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ತಾಲೂಕಿನ ಸಾರ್ವಜನಿಕರು ಹಾಗೂ ಸಹಕಾರಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಸದ ಈರಣ್ಣ ಕಡಾಡಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ, ಸಹಕಾರಿಯ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ನಿರ್ದೇಶಕರಾದ ಪರಪ್ಪ ಮಳವಾಡ, ಬಾಳಪ್ಪ ಸಂಗಟಿ, ಸಹದೇವ ಹೆಬ್ಬಾಳ, ಶಿವಪ್ಪ ಗೋಸಬಾಳ, ಅಕ್ಕವ್ವ ಹಡಗಿನಾಳ, ಕಾಶವ್ವಾ ಹೆಬ್ಬಾಳ, ಮಲ್ಲಿಕಾರ್ಜುನ ಹುಲೆನ್ನವರ, ನಿಂಗಪ್ಪ ಮಿಡಕನಟ್ಟಿ ಪ್ರಧಾನ ವ್ಯವಸ್ಥಾಪಕ (ಪ್ರಬಾರಿ) ಪರಪ್ಪ ಗಿರೆಣ್ಣವರ ಉಪಸ್ಥಿತರಿದ್ದರು.


Spread the love

About inmudalgi

Check Also

ರಾಜ್ಯದಲ್ಲಿ ಉಪ್ಪಾರ ಸಮುದಾಯ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ – ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ

Spread the loveಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮುದಾಯದವರು ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಉಪ್ಪಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ